ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈ ಹಿಂದೆ ಸುರಿದಿದ್ದ ಮಹಾಮಳೆಗೆ ಜನರು ನಲುಗಿದ್ದರು. ಈಗ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು, ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮಲೆನಾಡಲ್ಲಿ ವರುಣನ ಆರ್ಭಟದಿಂದ ಜನಜೀವನ ಅಸ್ತವ್ಯಸ್ತ: ನದಿಗಳಲ್ಲಿ ನೀರಿನ ಭೋರ್ಗರೆತ - ಮಲೆನಾಡು ಭಾಗ
ಮಲೆನಾಡು ಭಾಗದಲ್ಲಿ ಮಳೆರಾಯನ ಆರ್ಭಟ ಮಂದುವರೆದಿದ್ದು, ತುಂಗಾ-ಭದ್ರಾ, ಹೇಮಾವತಿ ಜಲಾಶಯಗಳ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ.
ಹೌದು, ಮೂರು ದಿನಗಳಿಂದ ನಿರಂತರವಾಗಿ ಮೂಡಿಗೆರೆ ತಾಲೂಕಿನಾದ್ಯಂತ ನಿರಂತರ ಮಳೆ ಸುರಿಯುತ್ತಿದೆ. ನಿರಾಶ್ರಿತ ಕೇಂದ್ರದಿಂದ ಊರಿಗೆ ತೆರಳಿದ್ದ ಮಂದಿ ಮತ್ತೆ ಊರು ಬಿಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಎನ್.ಆರ್.ಪುರ, ಶೃಂಗೇರಿ, ಕೊಪ್ಪದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೇ, ಮೂಡಿಗೆರೆಯಲ್ಲಿ ಮಾತ್ರ ಮಳೆರಾಯನ ಅಬ್ಬರ ಜೋರಾಗಿದೆ. ಮೂಡಿಗೆರೆಯ ಚಾರ್ಮಾಡಿ ಘಾಟಿ, ಜಾವಳಿ, ಊರಬಗೆ, ಹೊಸಕೆರೆ, ಕಳಸ, ದುರ್ಗದಹಳ್ಳಿ, ಬಣಕಲ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಗ್ರಾಮೀಣ ಭಾಗದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಶಾಲಾ-ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿಗಳು ಮನೆಗೆ ಹಿಂದಿರುಗಲು ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದುಬಂದಿದೆ.