ಚಿಕ್ಕಮಗಳೂರು: ಜಿಲ್ಲೆಗಯಲ್ಲಿ ಮುಂಗಾರು ಆರಂಭವಾಗಿದ್ದು, ನಿನ್ನೆಯಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯಲಾರಂಭಿಸಿದೆ.
ಕಾಫಿನಾಡಿನಲ್ಲಿ ಮುಂಗಾರು ಜೋರು: ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ - ಕಾಫಿನಾಡಿನಲ್ಲಿ ಮುಂಗಾರಿನ ಆರಂಭ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಕಾಫಿನಾಡಿನಲ್ಲಿ ಮುಂಗಾರಿನ ಆರಂಭ
ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ನಂತರ ನಿರಂತರವಾಗಿ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಮಲೆನಾಡು ಭಾಗದಲ್ಲಿಯೂ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ, ಕೊಟ್ಟಿಗೆಹಾರ, ಮೂಡಿಗೆರೆ, ಶೃಂಗೇರಿ, ಕೊಪ್ಪ ಭಾಗಗಳಲ್ಲಿ ಭಾರೀ ಗಾಳಿಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿವೆ. ಹಲವು ಭಾಗಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ. ಜೊತೆಗೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರದಲ್ಲಿ ಕೂಡ ವ್ಯತ್ಯಯ ಉಂಟಾಗಿದೆ.