ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ : ಮೈದುಂಬಿ ಹರಿಯುತ್ತಿವೆ ನದಿಗಳು - ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ ಮೈದುಂಬಿ ಹರಿಯುತ್ತಿವೇ ನದಿಗಳು

ಕಳಸ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ಸೇತುವೆ ಮಟ್ಟಕ್ಕೆ, ನೀರು ಹರಿಯುತ್ತಿದ್ದು, ಇನ್ನು ಮೂರು ಅಡಿ ನೀರು ಹೆಚ್ಚಳವಾದರೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗುವ ಸಾಧ್ಯತೆ ಇದೆ. ಪಂಚ ತೀರ್ಥಗಳಲ್ಲಿ ಒಂದಾಗಿರುವ ವಸಿಷ್ಠ ತೀರ್ಥ ಬಳಿಯೂ ನೀರು ಹೆಚ್ಚಳ ಉಂಟಾಗಿದ್ದು, ಇಲ್ಲಿಯೂ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ..

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ

By

Published : Jul 14, 2021, 8:37 PM IST

ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಇಂದು ಬೆಳಗ್ಗೆಯಿಂದಲೇ ಮಲೆನಾಡು ಭಾಗದಲ್ಲಿ ವರುಣ ಆರ್ಭಟಿಸುತ್ತಿದ್ದು, ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್ ಪುರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ.

ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸುತ್ತಮುತ್ತಲೂ ಮಳೆಯಾಗುತ್ತಿದ್ದು, ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮೂಡಿಗೆರೆ ತಾಲೂಕಿನ ಗೌಡಳ್ಳಿಯಲ್ಲಿ ಸೇತುವೆ ಮಟ್ಟದಲ್ಲಿ ಹೇಮಾವತಿ ನದಿ ಹರಿಯುತ್ತಿದ್ದು, ಮೈದುಂಬಿ ತುಂಗಾ, ಭದ್ರಾ ನದಿಗಳು ಹರಿಯಲು ಪ್ರಾರಂಭವಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ

ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮಲೆನಾಡಿನ ವಿವಿಧ ಭಾಗದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಹಾಗೂ ವಿದ್ಯುತ್‌ನಲ್ಲಿ ವ್ಯತ್ಯಯ ಕಂಡು ಬರುತ್ತಿದೆ. ವಾಹನ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲೆಯ ಎಲ್ಲಾ ನದಿಗಳು ಮೈದುಂಬಿ ಹರಿಯಲು ಪ್ರಾರಂಭ ಮಾಡಿವೆ. ಜಿಲ್ಲೆಯ ತುಂಗ, ಭದ್ರಾ, ಹೇಮಾವತಿ ನದಿಗಳ ಹರಿವಿನ ಮಟ್ಟದಲ್ಲಿ ಹೆಚ್ಚಳ ಉಂಟಾಗಿದ್ದು, ಮೂಡಿಗೆರೆ ತಾಲೂಕಿನ ಕುದುರೆಮುಖ ಹಾಗೂ ಪಶ್ಚಿಮ ಘಟ್ಟ ಭಾಗದಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿದೆ.

ಕಳಸ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ಸೇತುವೆ ಮಟ್ಟಕ್ಕೆ, ನೀರು ಹರಿಯುತ್ತಿದ್ದು, ಇನ್ನು ಮೂರು ಅಡಿ ನೀರು ಹೆಚ್ಚಳವಾದರೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗುವ ಸಾಧ್ಯತೆ ಇದೆ. ಪಂಚ ತೀರ್ಥಗಳಲ್ಲಿ ಒಂದಾಗಿರುವ ವಸಿಷ್ಠ ತೀರ್ಥ ಬಳಿಯೂ ನೀರು ಹೆಚ್ಚಳ ಉಂಟಾಗಿದ್ದು, ಇಲ್ಲಿಯೂ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ABOUT THE AUTHOR

...view details