ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ವರ್ಷಧಾರೆ ಮುಂದುವರಿದಿದ್ದು, ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್. ಪುರ ತಾಲೂಕುಗಳಲ್ಲಿ ಭಾರಿ ಮಳೆ ಆಗುತ್ತಿದೆ. ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ; ಗುಡ್ಡ ಕುಸಿತ, ಮನೆಗಳಿಗೆ ಹಾನಿ
ಕಾಫಿನಾಡಿನಲ್ಲಿ ವರ್ಷಧಾರೆ ಮುಂದುವರೆದಿದ್ದು, ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್. ಪುರ ತಾಲೂಕುಗಳಲ್ಲಿ ಭಾರಿ ಮಳೆ ಆಗುತ್ತಿದೆ. ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸತತ ಮಳೆಯಿಂದ ತುಂಗಾ, ಭದ್ರ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ಕಳಸದ ಹೆಬ್ಬಾಳೆ ಸೇತುವೆ ಮುಳುಗುವ ಹಂತಕ್ಕೆ ತಲುಪಿದೆ.
ಚಿಕ್ಕಮಗಳೂರು ಜಿಲ್ಲೆ
ಕೊಪ್ಪ ತಾಲ್ಲೂಕಿನ ಗುಡ್ಡೆತೋಟ ಸಮೀಪ ರಾಜ್ಯ ಹೆದ್ದಾರಿಯ ಮೇಲೆ ಗುಡ್ಡ ಕುಸಿದಿದೆ. ಸತತ ಮಳೆಯಿಂದ ತುಂಗಾ, ಭದ್ರ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ಹೊರನಾಡಿಗೆ ಸಂಪರ್ಕ ಕಲ್ಪಿಸುವ ಕಳಸದ ಹೆಬ್ಬಾಳೆ ಸೇತುವೆ ಮುಳುಗುವ ಹಂತಕ್ಕೆ ತಲುಪಿದೆ.
ಇನ್ನೊಂದು ಕಡೆ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮ ಬಳಿ ಮಣ್ಣು ಕುಸಿತ ಉಂಟಾಗಿದ್ದು, ಮರ ಧರೆಗುರುಳಿದೆ. ಬಸರಿಕಟ್ಟೆ-ಕೊಗ್ರೆ ಮಾರ್ಗದ ಸಂಚಾರ ಬಂದ್ ಆಗಿದ್ದು, ಮೂಡಿಗೆರೆ ತಾಲೂಕಿನ ಬಕ್ಕಿ, ಹೆಸ್ಗಲ್, ಕೊಟ್ಟಿಗೆಹಾರದಲ್ಲಿ ಮನೆಗಳಿಗೆ ಹಾನಿ ಆಗಿದೆ.