ಕರ್ನಾಟಕ

karnataka

ETV Bharat / state

ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ: ಚಿಕ್ಕಮಗಳೂರು-ದಕ್ಷಿಣ ಕನ್ನಡ ರಸ್ತೆ ಸಂಪರ್ಕ ಕಡಿತ - ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್

ಬಿಡದೇ ಸುರಿಯುತ್ತಿರುವ ಮಳೆಗೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಹಾಗೆಯೇ ಮಂಗಳೂರು-ಚಿಕ್ಕಮಗಳೂರು ಮಾರ್ಗದಲ್ಲಿ ಗುಡ್ಡ ಕುಸಿದ ಪರಿಣಾಮ ಚಾರ್ಮಾಡಿ ಘಾಟ್ ರಸ್ತೆ ಸಂಚಾರವನ್ನು 4 ದಿನಗಳ ವರೆಗೆ ಬಂದ್ ಮಾಡಲಾಗಿದೆ.

ಚಾರ್ಮುಡಿ ಘಾಟ್​ನಲ್ಲಿ ಗುಡ್ಡ ಕುಸಿತ

By

Published : Aug 7, 2019, 9:46 AM IST

Updated : Aug 7, 2019, 10:52 AM IST

ಚಿಕ್ಕಮಗಳೂರು/ಮಂಗಳೂರು:ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಗುಡ್ಡ ಹಾಗೂ ಮಣ್ಣು ಕುಸಿದಿದ್ದರಿಂದ ಚಾರ್ಮಾಡಿ ಘಾಟ್ ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ.

ಚಾರ್ಮಾಡಿ ಘಾಟ್ ರಸ್ತೆಯ ನಾಲ್ಕೈದು ಕಡೆ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದಲ್ಲಿ ರಸ್ತೆಗೆ ಗುಡ್ಡದ ಮಣ್ಣು ಬಂದು ಅಪ್ಪಳಿಸಿದೆ. ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಚಾರ್ಮಾಡಿ ಘಾಟ್ ಮಾರ್ಗದ ಚಿಕ್ಕಮಗಳೂರು-ದಕ್ಷಿಣ ಕನ್ನಡ ಸಂಪರ್ಕ ಕಡಿತ ಮಾಡಲಾಗಿದೆ.

ಚಾರ್ಮುಡಿ ಘಾಟ್​ನಲ್ಲಿ ಗುಡ್ಡ ಕುಸಿತ

ರಸ್ತೆಗೆ ಬಿದ್ದಿದ್ದ ಮಣ್ಣನ್ನ ತೆರವುಗೊಳಿಸಲು ಹರಸಾಹಸ ಪಡಲಾಗುತ್ತಿದ್ದು, ರಾತ್ರಿಯಿಡೀ ಮಣ್ಣು ತೆರವುಗೊಳಿಸಲು ಸಾರ್ವಜನಿಕರು, ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಬಣಕಲ್, ಬೆಳ್ತಂಗಡಿ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಪ್ರಯಾಣಿಕರು ಸಿಲುಕಿಕೊಂಡು ಪರದಾಡುವಂತಾಗಿದೆ.

ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ:

ಚಾರ್ಮಾಡಿ ಘಾಟ್​​ನಲ್ಲಿ ಸೋಮವಾರ ರಾತ್ರಿಯಿಂದ ಗುಡ್ಡ ಕುಸಿತ , ಮರ ಕುಸಿತ ಘಟನೆಗಳು ನಡೆಯುತ್ತಲ್ಲೇ ಇವೆ. ನಿನ್ನೆಯಿಂದ ಬಿದ್ದ ಮಣ್ಣು , ಮರ ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ರಾತ್ರಿಯಿಂದ ಮತ್ತೆ ಮರ ಕುಸಿತ, ಗುಡ್ಡ ಕುಸಿತ ಪರಿಣಾಮ ಇನ್ನೂ ನಾಲ್ಕು ದಿನ ಚಾರ್ಮಾಡಿ ಘಾಟ್​ನಲ್ಲಿ ರಸ್ತೆ ಸಂಚಾರ ಬಂದ್ ಮಾಡಲು ದಕ್ಷಿಣ ಜಿಲ್ಲಾಡಳಿತ ನಿರ್ಧರಿಸಿದೆ. ಈ ಬಗ್ಗೆ ದ.ಕ ಡಿಸಿ ಸಸಿಕಾಂತ್ ಸೆಂಥಿಲ್ ಈಟಿವಿ ಭಾರತ್ ಜೊತೆ ‌ಮಾತನಾಡಿ, ಚಾರ್ಮಾಡಿ ಘಾಟ್​​ನಲ್ಲಿ ದುರಸ್ತಿ ಕಾರ್ಯ ನಡೆಯಬೇಕಾಗಿರುವುದರಿಂದ ನಾಲ್ಕು ದಿನ ರಸ್ತೆ ಸಂಚಾರ ಬಂದ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Last Updated : Aug 7, 2019, 10:52 AM IST

ABOUT THE AUTHOR

...view details