ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ಗುಡ್ಡ ಕುಸಿತದಿಂದಾಗಿ ಕಳೆದ 6 ದಿನಗಳಿಂದ ಸಂಪರ್ಕ ಕಳೆದುಕೊಂಡಿದ್ದ ಸುಮಾರು 10 ಜನರನ್ನು ಯೋಧರು ರಕ್ಷಣೆ ಮಾಡಿದ್ದಾರೆ.
ಮೂಡಿಗೆರೆಯಲ್ಲಿ 6 ದಿನಗಳಿಂದ ಸಂಪರ್ಕ ಕಳೆದುಕೊಂಡಿದ್ದ 10 ಜನರ ರಕ್ಷಣೆ: ಯೋಧರ ಸಾಹಸಕ್ಕೆ ಶ್ಲಾಘನೆ
ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ಗುಡ್ಡ ಕುಸಿತದಿಂದಾಗಿ ಕಳೆದ 6 ದಿನಗಳಿಂದ ಸಂಪರ್ಕ ಕಳೆದುಕೊಂಡಿದ್ದ ಸುಮಾರು 10 ಜನರನ್ನು ಯೋಧರು ರಕ್ಷಣೆ ಮಾಡಿದ್ದಾರೆ.
ಬೆಳಗ್ಗೆ ಕಾರ್ಯಾಚರಣೆ ನಡೆಸಿದ ಯೋಧರಿಗೆ ಸ್ಥಳೀಯರು ಸಾಥ್ ನೀಡಿದ್ದು, ರಸ್ತೆಯಲ್ಲಿ ಬಿದ್ದಿದ್ದ ಗಿಡ, ಮರ, ಮಣ್ಣು ಎಲ್ಲವನ್ನೂ ತೆರವು ಮಾಡಿ ಕೊನೆಗೂ ಗ್ರಾಮಕ್ಕೆ ತಲುಪಿ ಎಲ್ಲಾ ಜನರನ್ನು ರಕ್ಷಣೆ ಮಾಡಿದ್ದಾರೆ. ಇದರಲ್ಲಿ ಒಬ್ಬರು ಸ್ಪೈನಲ್ ಕಾರ್ಡ್ ಸಮಸ್ಯೆಯಿಂದ ನರಳುತ್ತಿದ್ದು, ಇನ್ನೋರ್ವ ವ್ಯಕ್ತಿ ಕ್ಯಾನ್ಸರ್ ಪೀಡಿತರಾಗಿದ್ದಾರೆ. ವಯಸ್ಸಾದ ಅಜ್ಜಿಯನ್ನು ಸುಮಾರು 5 ಕಿ.ಮೀ. ದೂರ ಚೇರ್ ಮೇಲೆ ಕೂರಿಸಿಕೊಂಡು ಹೆಗಲ ಮೇಲೆ ಹೊತ್ತು ತಂದಿದ್ದು ನಿಜಕ್ಕೂ ಶ್ಲಾಘನೀಯ.
ಯೋಧರಿಗೆ ಸ್ಥಳೀಯ ಯುವಕರು ಸಾಥ್ ನೀಡಿದ್ದು, ಯೋಧರಿಗೆ ನಾವು ಎಂದೆಂದಿಗೂ ಚಿರಋಣಿ ಎಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಕಳಸ ಭಾಗದಲ್ಲಿ ಪ್ರವಾಸ ಮಾಡುತ್ತಿದ್ದ ಜಿಲ್ಲಾಧಿಕಾರಿ ಬಗಾದಿ ಗೌತಮ್ ಹಾಗೂ ಜಿಲ್ಲಾ ಎಸ್ಪಿ ಹರೀಶ್ ಪಾಂಡೆ ಅವರನ್ನು ಸ್ಥಳೀಯ ಜನರು ಅಡ್ಡಗಟ್ಟಿ ತರಾಟೆಗೆ ತೆಗೆದುಕೊಂಡಿದ್ದು, ನಮ್ಮ ಗ್ರಾಮಗಳಿಗೂ ಭೇಟಿ ನೀಡಿ ಎಂದು ಮನವಿ ಮಾಡಿದ್ದಾರೆ.