ಕರ್ನಾಟಕ

karnataka

ETV Bharat / state

ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ರಸ್ತೆಯಲ್ಲಿ ಬಿರುಕು: ಸಂಚರಿಸದಂತೆ ಪೊಲೀಸರ ಮನವಿ

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದೆ. ಮಣ್ಣು ಕುಸಿತಗೊಂಡ ಹಿನ್ನೆಲೆಯಲ್ಲಿ ರಸ್ತೆ ಬಿರುಕು ಬಿಟ್ಟಿದೆ. ಹೀಗಾಗಿ, ದಕ್ಷಿಣ ಕನ್ನಡದಿಂದ - ಚಿಕ್ಕಮಗಳೂರಿಗೆ ಬರುವಂತಹ ಸಾರ್ವಜನಿಕರು ಸದ್ಯದ ಪರಿಸ್ಥಿತಿಯಲ್ಲಿ ಈ ರಸ್ತೆಯಲ್ಲಿ ಸಂಚರಿಸದಂತೆ ಪೊಲೀಸರು ಮನವಿ ಮಾಡಿದ್ದಾರೆ.

By

Published : Aug 7, 2020, 4:51 PM IST

ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ
ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ, ಜನಜೀವನ ಅಸ್ತವ್ಯಸ್ತವಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದ್ದು, ಬೃಹತ್ ಗಾತ್ರದ ಬಂಡೆಗಳು ಹಾಗೂ ಮಣ್ಣು ರಸ್ತೆಗೆ ಬಂದು ಬಿದ್ದಿದೆ.

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತವಾಗಿದ್ದು, ರಸ್ತೆ ಸಂಚಾರಕ್ಕೆ ತೊಡಕಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಮಣ್ಣು ಹಾಗೂ ಬಂಡೆಯನ್ನು ಮಳೆಯ ನಡುವೆಯೇ ತೆರವು ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇದೇ ವೇಳೆ, ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸುಮಾರು ಎರಡು ಕಿಲೋಮೀಟರ್​ನಷ್ಟು ದೂರ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಚಾರ್ಮಾಡಿ ಘಾಟ್‌ ರಸ್ತೆ ಬಿರುಕು ಬಿಟ್ಟಿರುವುದು.

ಘಾಟಿಯಲ್ಲಿ ಗುಡ್ಡದ ಮಣ್ಣು ಕುಸಿತಗೊಂಡ ಪರಿಣಾಮ ರಸ್ತೆ ಬಿರುಕು ಬಿಟ್ಟಿದೆ. ದಕ್ಷಿಣ ಕನ್ನಡದಿಂದ- ಚಿಕ್ಕಮಗಳೂರು ಜಿಲ್ಲೆಗೆ ಬರುವಂತಹ ಸಾರ್ವಜನಿಕರು ಸದ್ಯದ ಪರಿಸ್ಥಿತಿಯಲ್ಲಿ ಈ ರಸ್ತೆಯಲ್ಲಿ ಸಂಚರಿಸದಂತೆ ಪೊಲೀಸರು ಮನವಿ ಮಾಡಿದ್ದಾರೆ.

ABOUT THE AUTHOR

...view details