ಚಿಕ್ಕಮಗಳೂರು: ಕೊರೊನಾ ನಿಯಂತ್ರಣಕ್ಕೆ ಜನರು ಸಹಕಾರ ಕೊಡದಿದ್ದರೆ ಹಾಗೂ ಪ್ರಕರಣಗಳು ಹೆಚ್ಚಾದರೆ ಲಾಕ್ಡೌನ್ ಅನಿವಾರ್ಯ ಎಂದು ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಚಿಕ್ಕಮಗಳೂರಿನ ಜ್ಯೂನಿಯರ್ ಕಾಲೇಜಿನಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು. ಜನರ ಜೀವ ಉಳಿಸುವುದು ಸರ್ಕಾರದ ಬದ್ಧತೆ. ಕೊರೊನಾ ನಿಯಂತ್ರಣಕ್ಕೆ ಜನರು ಸಹಕಾರ ಕೊಡದಿದ್ದರೆ ಲಾಕ್ಡೌನ್ ಅನಿವಾರ್ಯ. ಚಿಕ್ಕಮಗಳೂರು ಜಿಲ್ಲೆಯಲ್ಲಿ 48,707 ಮಕ್ಕಳಿಗೆ ಲಸಿಕೆ ನೀಡುವ ಗುರಿ ಇಟ್ಟು ಕೊಳ್ಳಲಾಗಿದೆ. ಇಂದು 150 ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು ಎಂದರು.
ಓದಿ:ಲಾಕ್ಡೌನ್ ಜಾರಿಯಾದರೂ ನಾವು ನಮ್ಮ ಪಾದಯಾತ್ರೆ ನಿಲ್ಲಿಸುವುದಿಲ್ಲ: ಸರ್ಕಾರಕ್ಕೆ ಡಿಕೆಶಿ ಸವಾಲು