ಕರ್ನಾಟಕ

karnataka

ETV Bharat / state

ಮೈಸೂರು ಪೊಲೀಸರಿಗೆ ಕೃತಜ್ಞತೆ ಸಲ್ಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ - ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಎಲ್ಲರನ್ನೂ ಬಂಧಿಸುತ್ತಿದ್ದಾರೆ. ಎಲ್ಲರಿಗೂ ಶಿಕ್ಷೆಯಾಗುವಂತೆ ಪೊಲೀಸರು ವಿಶೇಷ ಶ್ರಮ ವಹಿಸುತ್ತಿದ್ದಾರೆ. ಸಂತ್ರಸ್ತೆ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಸ್ಥಿತಿಯಲ್ಲಿಲ್ಲ, ಆಕೆ ಮೇಲೆ ಒತ್ತಡ ಹಾಕುವುದು ಸರಿಯಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ
ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

By

Published : Aug 31, 2021, 7:36 PM IST

ಚಿಕ್ಕಮಗಳೂರು : ಮೈಸೂರಿನ ಎರಡೂ ಪ್ರಕರಣಗಳನ್ನೂ ನಮ್ಮ ಪೊಲೀಸರು ಕಡಿಮೆ ಸಮಯದಲ್ಲಿ ಭೇದಿಸಿದ್ದಾರೆ. ಅವರ ಕಾರ್ಯಕ್ಷಮತೆಗೆ ನನ್ನ ಕೃತಜ್ಞತೆ ಎಂದು ಜಿಲ್ಲೆಯ ಕಡೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಎಲ್ಲರನ್ನೂ ಬಂಧಿಸುತ್ತಿದ್ದಾರೆ. ಎಲ್ಲರಿಗೂ ಶಿಕ್ಷೆಯಾಗುವಂತೆ ಪೊಲೀಸರು ವಿಶೇಷ ಶ್ರಮ ವಹಿಸುತ್ತಿದ್ದಾರೆ. ಸಂತ್ರಸ್ತೆ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಸ್ಥಿತಿಯಲ್ಲಿಲ್ಲ, ಆಕೆ ಮೇಲೆ ಒತ್ತಡ ಹಾಕುವುದು ಸರಿಯಲ್ಲ ಎಂದರು.

ಸಂತ್ರಸ್ತೆಯನ್ನ ಘಟನೆಯ ಬಗ್ಗೆ ಮಹಿಳಾ ಅಧಿಕಾರಿಗಳು ಮಾಹಿತಿ ಪಡೆಯುವ ಪ್ರಯತ್ನ ಮಾಡಿದ್ದಾರೆ. ಸ್ವಲ್ಪ ಸಮಯದ ಬಳಿಕ ಹೇಳಬಹುದು. ಅಪರಾಧ ಮಾಡುವವರಿಗೆ ದೊಡ್ಡ ಸಂದೇಶ ಹೋಗಿದೆ. ಏನಾದ್ರು ಮಾಡಿ ಹೇಗಾದರೂ ಬಚಾವ್ ಆಗಬಹುದು ಅನ್ನೋದು ನಡೆಯಲ್ಲ ಎಂದು ಅವರಿಗೆ ಮನವರಿಕೆ ಯಾಗಿದೆ ಎಂದರು.

ಇದನ್ನೂ ಓದಿ : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ- ಡಿಕೆಶಿ ಫೈಟ್​ ಮುಗಿದಿಲ್ಲ: ಉಮೇಶ್​ ಕತ್ತಿ

ABOUT THE AUTHOR

...view details