ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ: ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ ನೆರೆ ಸಂತ್ರಸ್ತರು - ಚಿಕ್ಕಮಗಳೂರಲ್ಲಿ ಸಂತ್ರಸ್ತರ ಪ್ರತಿಭಟನೆ

ಚಿಕ್ಕಮಗಳೂರಲ್ಲಿ ಕಳೆದ ಮೂರು ದಿನಗಳಿಂದ 2019ರಲ್ಲಿ ಸುರಿದ ಮಳೆಯಿಂದ ಸೂರು, ಜಮೀನು ಕಳೆದುಕೊಂಡ ಸಂತ್ರಸ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಇವರು ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ.

Homelessness Victims protest against govt in chikmagalur
ಚಿಕ್ಕಮಗಳೂರಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರ ಪ್ರತಿಭಟನೆ

By

Published : Mar 5, 2022, 3:45 PM IST

ಚಿಕ್ಕಮಗಳೂರು: 2019ರ ಮಹಾ ಮಳೆಯಿಂದ ಮನೆ, ಜಮೀನು ಕಳೆದುಕೊಂಡ ನೆರೆ ಸಂತ್ರಸ್ತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಮೂರನೇ ದಿನಕ್ಕೆ ಕಾಲಿಟ್ಟಿದೆ.

ಚಿಕ್ಕಮಗಳೂರಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರ ಪ್ರತಿಭಟನೆ

ಜಿಲ್ಲೆಯ ಕಳಸ ಪಟ್ಟಣದಲ್ಲಿ ಸಂತ್ರಸ್ತರು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಈ ಭಾಗದ ಜನರಿಗೆ ಯಾವುದೇ ರೀತಿಯ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಟ್ಟಿಲ್ಲ. ಈ ಹಿನ್ನೆಲೆಲಯಲ್ಲಿ ಧರಣಿ ನಡೆಸುತ್ತಿದ್ದಾರೆ. ನಮ್ಮನ್ನು ಬದುಕಲು ಬಿಡಿ, ಇಲ್ಲವೇ ದಯಾ ಮರಣಕ್ಕೆ ಅವಕಾಶ ಕೊಡಿಯೆಂದು ರಾಜ್ಯಪಾಲರಿಗೆ ಪತ್ರವನ್ನು ಬರೆದು ಸಂತ್ರಸ್ತರು ಆಕ್ರೋಶ ಹೊರಹಾಕಿದ್ದಾರೆ.

ಚಿಕ್ಕಮಗಳೂರಲ್ಲಿ ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ ಧರಣಿ ನಿರತ ಸಂತ್ರಸ್ತರು

ಈ ಭಾಗದ ಸಂತ್ರಸ್ತರ ಹಿತಕಾಯಲು ಜನಪ್ರತಿನಿಧಿಗಳು, ಅಧಿಕಾರಿಗಳು ವಿಫಲರಾಗಿದ್ದಾರೆ. ಕೂಡಲೇ ಸರ್ಕಾರ ನಮ್ಮ ಸಮಸ್ಯೆಯನ್ನು ಬಗೆಹರಿಸಿ ಎಲ್ಲರಂತೆ ಜೀವನ ಸಾಗಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಮನವಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಂಡ್ಯ: ದೇವಸ್ಥಾನದಲ್ಲಿ ಕುಸಿದುಬಿದ್ದು 8 ತಿಂಗಳ ಗರ್ಭಿಣಿ ಸಾವು

ABOUT THE AUTHOR

...view details