ಚಿಕ್ಕಮಗಳೂರು :ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಲ್ಲಕ್ಕಿ ಎಸ್ಟೇಟ್ನಲ್ಲಿ ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ವಿನೋದ, ಪುಷ್ಪ, ಪ್ರೇಮ ಎಂಬುವವರು ಗಾಯ ಗೊಂಡಿದ್ದಾರೆ. ಗಾಯಾಳುಗಳನ್ನು ಬಣಕಲ್ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲ್ಲಕ್ಕಿ ಎಸ್ಟೇಟ್ನಲ್ಲಿ ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ - ಈಟಿವಿ ಭಾರತ್ ಕನ್ನಡ ನ್ಯೂಸ್
ಎಸ್ಟೇಟ್ನಲ್ಲಿ ಕೆಲಸ ಮಾಡುವಾಗ ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ಏಕಾ ಏಕಿ ದಾಳಿ ನಡೆಸಿವೆ.
Published : Sep 28, 2023, 9:24 PM IST
ತೋಟಗಳಲ್ಲಿ ಜೇನುಗಳು ಗೂಡು ಕಟ್ಟಿ ಕೊಂಡಿದ್ದು, ರಸ್ತೆಯಲ್ಲಿ ಓಡಾಡುವವರ ಮೇಲೆ ಹಾಗೂ ಕೂಲಿ ಕೆಲಸ ಮಾಡುವವರ ಮೇಲೆ ದಾಳಿ ಮಾಡುತ್ತಿವೆ. ಇದರಿಂದಾಗಿ ಯುವಕರು, ಯುವತಿಯರು ಸೇರಿದಂತೆ ಗ್ರಾಮದ ಹಲವರು ಜೇನು ದಾಳಿಗೆ ತುತ್ತಾಗಿ ಆಸ್ಪತ್ರೆ ಸೇರಿದ ಉದಾಹರಣೆ ಸಾಕಷ್ಟು ನಡೆದಿವೆ. ಜೇನು ಹುಳುಗಳ ಹಠಾತ್ ದಾಳಿಗೆ ಆತಂಕಗೊಂಡಿರುವ ಗ್ರಾಮಸ್ಥರು ದಾಳಿ ನಡೆದ ರಸ್ತೆಯಲ್ಲಿ ಓಡಾಡುವುದಕ್ಕೆ ಭಯ ಪಡುವಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದನ್ನೂ ಓದಿ :ಪ್ರತಿಭಟನೆ ವೇಳೆ ಸಂಸದ ಎಸ್ ಮುನಿಸ್ವಾಮಿ ಸೇರಿದಂತೆ ಬಿಜೆಪಿ ಕಾರ್ಯಕರ್ತರ ಮೇಲೆ ಹೆಜ್ಜೇನುದಾಳಿ