ಕರ್ನಾಟಕ

karnataka

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಭಕ್ತರ ಪ್ರವೇಶಕ್ಕೆ ಮುಕ್ತ..

By

Published : Jul 5, 2021, 12:34 PM IST

ಅನ್​ಲಾಕ್​ 3.0ನಲ್ಲಿ ರಾಜ್ಯಾದ್ಯಂತ ದೇವಾಲಯಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮೂರು ತಿಂಗಳಿಂದ ಬೀಗ ಹಾಕಿದ್ದ ರಾಜ್ಯದ ಪ್ರಸಿದ್ಧ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಭಕ್ತರ ಪ್ರವೇಶಕ್ಕೆ ಇಂದಿನಿಂದ ಮುಕ್ತವಾಗಿದೆ.

Annapoorneshwari Temple
ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಭಕ್ತರ ಪ್ರವೇಶಕ್ಕೆ ಮುಕ್ತ

ಚಿಕ್ಕಮಗಳೂರು: ಕೊರೊನಾ ಆತಂಕದಿಂದ ಕಳೆದ ಮೂರು ತಿಂಗಳಿನಿಂದ ಬಾಗಿಲು ಹಾಕಿದ್ದ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಭಕ್ತರ ದರ್ಶನಕ್ಕೆ ಬಾಗಿಲು ತೆರೆದಿದ್ದು, ಇಂದು ಭಕ್ತರ ಸಮ್ಮುಖದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಭಕ್ತರ ಪ್ರವೇಶಕ್ಕೆ ಮುಕ್ತ

ಅನ್ನಪೂರ್ಣೇಶ್ವರಿ ದೇವಿ ದರ್ಶನ, ಮಂಗಳಾರತಿಗಷ್ಟೇ ಅವಕಾಶ ನೀಡಲಾಗಿದ್ದು, ಪ್ರಸಾದ ಸೇರಿ ಯಾವುದೇ ಸೇವೆ ಲಭ್ಯವಿರುವುದಿಲ್ಲ. ಭಕ್ತರ ಆರೋಗ್ಯದ ದೃಷ್ಠಿಯಿಂದ ಕೆಲವೊಂದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಅವನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮಕರ್ತ ಭೀಮೇಶ್ವರ ಜೋಶಿ, ಇಂದಿನಿಂದ ಭಕ್ತರಿಗೆ ದೇವಿಯ ದರ್ಶನಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಭಕ್ತರು ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್​, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಹಾಗೆಯೇ ಭಕ್ತರು ಹಸಿವಿನಿಂದ ಬಂದು ವಾಪಸ್​ ತೆರಳಬಾರದು. ಹೀಗಾಗಿ, ಸರ್ಕಾರ ದೇವಾಲಯದಲ್ಲಿ ಅನ್ನದಾಸೋಹಕ್ಕೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ:ರಾಜ್ಯ ಅನ್​ಲಾಕ್​: ವಿವಿಧ ದೇವಾಲಯಗಳು ಓಪನ್​.. ಬೆಳಗ್ಗೆಯಿಂದಲೇ ವಿಶೇಷ ಪೂಜೆ

ABOUT THE AUTHOR

...view details