ಚಿಕ್ಕಮಗಳೂರು: ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ವಾರ್ಡನ್ ಕೊರೊನಾಗೆ ಬಲಿಯಾಗಿರುವ ಘಟನೆ ಕಡೂರಲ್ಲಿ ನಡೆದಿದೆ.
ಬೀರೂರು ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಕೊರೊನಾಗೆ ಬಲಿ - Chikkamagaluru hostel warden death
ಬೀರೂರು ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದ ಜಗದೀಶ್ ನಾಯಕ್ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

Hostel warden
ಜಗದೀಶ್ ನಾಯಕ್ (35) ಮೃತರು. ಇವರು ಜಿಲ್ಲೆಯ ತರೀಕೆರೆ ತಾಲೂಕಿನ ಮಲ್ಲೇನಹಳ್ಳಿ ನಿವಾಸಿಯಾಗಿದ್ದಾರೆ.
ಬೀರೂರು ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾಗಿ ಜಗದೀಶ್ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರಿಗೆ ಇತ್ತೀಚಿಗೆ ಕೊರೊನಾ ಸೋಂಕು ತಗುಲಿದ್ದು, ಕಡೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇವರು ಕೊನೆಯುಸಿರೆಳೆದಿದ್ದಾರೆ.