ಕರ್ನಾಟಕ

karnataka

ETV Bharat / state

ಕಾಫಿನಾಡಿನಲ್ಲಿ ಹೃದಯ ವಿದ್ರಾವಕ ಘಟನೆ, ಸಾವಿನಲ್ಲೂ ಒಂದಾದ ದಂಪತಿ - ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲು

ಮೃತ ಹರೀಶ್‌ಗೆ ಕೊರೊನಾ ಸೋಂಕು ಇರಲಿಲ್ಲ. ಕೆ.ಆರ್.ಎಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾದ್ದರಿಂದ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು..

husband and wife death in chikmagalore news
ಸಾವಿನಲ್ಲೂ ಒಂದಾದ ದಂಪತಿ

By

Published : May 11, 2021, 7:39 PM IST

ಚಿಕ್ಕಮಗಳೂರು :ಸಾವಿನಲ್ಲೂ ದಂಪತಿ ಒಂದಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಓದಿ: ಡಿ ಬಾಸ್ ತೋಟಕ್ಕೆ ಬಂದ ಗಣಪತಿ ಸಚ್ಚಿದಾನಂದ ಆಶ್ರಮದ ಅತಿಥಿ

ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಚಿಕ್ಕಮಗಳೂರಿನ ಕೋಟೆ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.

ನ್ಯುಮೋನಿಯಾದಿಂದ ಬಳಲುತ್ತಿದ್ದ ಹರೀಶ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಅವರ ಸಾವಿನ ಸುದ್ದಿ ಕೇಳಿ ಪತ್ನಿ ಸೌಮ್ಯ ಮನೆಯಲ್ಲಿ ಸಾವನ್ನಪ್ಪಿದ್ದಾರೆ.

ಮೃತ ಹರೀಶ್‌ಗೆ ಕೊರೊನಾ ಸೋಂಕು ಇರಲಿಲ್ಲ. ಕೆ.ಆರ್.ಎಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾದ್ದರಿಂದ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಫೋನ್‌ನಲ್ಲಿ ಅಮ್ಮನಿಗೆ ಮಗ ವಿಷಯ ತಿಳಿಸಿದ್ದಾನೆ. ವಿಷಯ ಕೇಳಿ ಹರೀಶ್ ಪತ್ನಿ ಸೌಮ್ಯ ಕೂಡ ಸಾವನ್ನಪ್ಪಿದ್ದು, ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ABOUT THE AUTHOR

...view details