ಚಿಕ್ಕಮಗಳೂರು:ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಮುಸುಕಿನ ಗುದ್ದಾಟ ವಿಚಾರವಾಗಿ ನಾನು ತಲೆ ಹಾಕಲ್ಲ. ಅದು ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಚಿಕ್ಕಮಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಸಿ.ಟಿ.ರವಿ, ಬೆಂಗಳೂರು ಉಸ್ತುವಾರಿ ಬಗ್ಗೆ ನಾನು ಮಾತನಾಡಲ್ಲ. ಯಾರಿಗೆ ಉಸ್ತುವಾರಿ ಕೊಡ್ಬೇಕು ಅನ್ನೋದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು. ಆಯಾ ಜಿಲ್ಲೆಯ ಪರಿಸ್ಥಿತಿ ಆಧರಿಸಿ ಅವರು ತೀರ್ಮಾನ ತೆಗೆದುಕೊಳ್ತಾರೆ. ಇದರ ಬಗ್ಗೆ ನಾವೇನೂ ಹೇಳಲು ಹೋಗುವುದಿಲ್ಲ ಎಂದರು.