ಚಿಕ್ಕಮಗಳೂರು:ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ನಿವಾಸಿಗಳನ್ನು ಪತ್ತೆ ಹಚ್ಚುವಲ್ಲಿ ಚಿಕ್ಕಮಗಳೂರು ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಿಂಸೆಯ ಭೋವಿ ಕಾಲೋನಿಯಲ್ಲಿ ಅಬ್ದುಲ್, ರಹುಲ್, ಮೋಮಿನ್ ಅಲಿ, ಸಲೀಂ ಎಂಬ ನಾಲ್ಕು ಜನ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿರುವುದು ಪೊಲೀಸರ ದಾಳಿ ವೇಳೆ ತಿಳಿದು ಬಂದಿದೆ.
ಕಾಫಿನಾಡಲ್ಲಿ ನಾಲ್ವರು ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ; ಪೊಲೀಸರ ವಶಕ್ಕೆ
ಚಿಕ್ಕಮಗಳೂರಿನ ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಜನ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ದಾಳಿ ಮಾಡಿ ಅವರ ದಾಖಲೆಗಳನ್ನು ಪರಿಶೀಲಿಸಿದಾಗ ಅವರು ಬಾಂಗ್ಲಾದೇಶದ ಪ್ರಜೆಗಳು ಎಂದು ತಿಳಿದು ಬಂದಿದೆ.
ಪಶ್ಚಿಮ ಬಂಗಾಳದಿಂದ ಕೂಲಿಗಾಗಿ ಭಾರತಕ್ಕೆ ಈ ನಾಲ್ಕು ಜನರು ಆಗಮಿಸಿದ್ದು, ಸುಮಾರು ಎರಡ್ಮೂರು ವರ್ಷಗಳಿಂದ ಕಾಫಿನಾಡಲ್ಲಿಯೇ ಕೆಲಸ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಎನ್.ಆರ್.ಪುರ ಪೊಲೀಸರು ದಾಳಿ ನಡೆಸಿದಾಗ ಮಾಹಿತಿ ಬಯಲಿಗೆ ಬಂದಿದೆ. ಪೊಲೀಸರು ತಪಾಸಣೆ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿದಾಗ ಬಾಂಗ್ಲಾದೇಶದ ಪ್ರಜೆಗಳು ಎಂದು ತಿಳಿದು ಬಂದಿದೆ.
ಈ ಹಿಂದೆಯೂ ಈ ಪ್ರದೇಶದಲ್ಲಿ ಬಾಂಗ್ಲಾ ನಿವಾಸಿಗಳು ಅಕ್ರಮ ನೆಲೆಸಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿದ್ದವು. ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಎಸ್ಪಿ ಅಕ್ಷಯ್ ಮಚಿಂದ್ರಾ ತಿಳಿಸಿದ್ದಾರೆ.