ಚಿಕ್ಕಮಗಳೂರು :ಹುಲಿ ಉಗುರು ಮಾರಾಟದ ವೇಳೆ, ಸ್ಥಳೀಯರ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಹುಲಿ ಉಗುರು, ಹಲ್ಲು ಮಾರುತ್ತಿದ್ದ ಖದೀಮರ ಬಂಧನ - ಹುಲಿ ಉಗುರು ಮಾರಾಟ ಆರೋಪಿ ಬಂಧನ
ಚಿಕ್ಕಮಗಳೂರು ರೈಲ್ವೆ ನಿಲ್ದಾಣದ ಬಳಿ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿ, 8 ಹುಲಿ ಉಗುರು, ಹುಲಿ ಹಲ್ಲು, ಮೂಳೆ ಸೇರಿದಂತೆ ಕೃತ್ಯಕ್ಕೆ ಬಳಸಿದ ಕಾರು ವಶಕ್ಕೆ ಪಡೆದಿದ್ದಾರೆ.
ಹುಲಿ ಉಗುರು ಮಾರಾಟ
ನಗರದ ಹೊರವಲಯದಲ್ಲಿರುವ ರೈಲ್ವೆ ನಿಲ್ದಾಣದ ಬಳಿ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿ, 8 ಹುಲಿ ಉಗುರು, ಹುಲಿ ಹಲ್ಲು, ಮೂಳೆ ಸೇರಿದಂತೆ ಕೃತ್ಯಕ್ಕೆ ಬಳಸಿದ ಕಾರು ವಶಕ್ಕೆ ಪಡೆದಿದ್ದಾರೆ.
ಸಾಗರ್, ಲೋಕೇಶ್ ಬಂಧಿತ ಆರೋಪಿಗಳು. ಡಿಸಿಐಬಿ ಇನ್ಸ್ಪೆಕ್ಟರ್ ಸತ್ಯನಾರಾಯಣ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.