ಚಿಕ್ಕಮಗಳೂರು:ಜಿಲ್ಲೆಯಲ್ಲಿ ಬಹಳ ದಿನಗಳ ನಂತರ ಮತ್ತೊಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಚಿಕ್ಕಮಗಳೂರಿನಲ್ಲಿ 19 ಸೋಂಕಿತ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಎರಡು ಪ್ರಕರಣ ತಪ್ಪಾಗಿ ವರದಿ ಬಂದಿವೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಕೇಸ್ ಪತ್ತೆ - Chikkamagaluru district
ಬಹಳ ದಿನಗಳ ನಂತರ ಕಡೂರು ತಾಲೂಕಿನ 15 ವರ್ಷದ ಬಾಲಕನಲ್ಲಿ ಸೋಂಕು ಪತ್ತೆಯಾಗಿದೆ. ಈ ಸೋಂಕು ತಗುಲಿದ್ದು ಹೇಗೆ ಎಂಬುದರ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದ್ದು, ಸೋಂಕಿತನನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಗ್ರಹ ಚಿತ್ರ
16 ಜನ ಸೋಂಕಿತರು ಜಿಲ್ಲಾ ಕೋವೀಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಆದರೆ ಇಂದು ಕಡೂರು ತಾಲೂಕಿನಲ್ಲಿ 15 ವರ್ಷದ ಬಾಲಕನಲ್ಲಿ ಸೋಂಕು ಪತ್ತೆಯಾಗಿದ್ದು, ಸ್ಥಳೀಯರ ತಲೆಬಿಸಿ ಮಾಡಿದೆ.
ಯುವಕ ವಾಸಿಸುತ್ತಿದ್ದ ಗ್ರಾಮದ ರಸ್ತೆಯನ್ನು ಪೊಲೀಸರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ. ಈತನಿಗೆ ಸೋಂಕು ಹೇಗೆ ತಗುಲಿದೆ ಎಂಬುದು ಇನ್ನೂ ಪತ್ತೆಯಾಗಿಲ್ಲ. ಈ ಕುರಿತು ಜಿಲ್ಲಾ ಆರೋಗ್ಯ ಇಲಾಖೆ ತನಿಖೆ ನಡೆಸಿದ್ದು, ಸೋಂಕಿತನನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.