ಚಿಕ್ಕಮಗಳೂರು/ರಾಯಚೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಯೋಗ ದಿನವನ್ನು ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗಿತ್ತು. ಇಂದು ನಡೆದ ಯೋಗ ದಿನಾಚರಣೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಯೋಗ ಮಾಡಿ ಯೋಗ ದಿನಕ್ಕೆ ಅರ್ಥ ಕಲ್ಪಿಸಿಕೊಟ್ಟಿದ್ದಾರೆ.
ಇದರೊಂದಿಗೆ ಬಾಳೆಹೂನ್ನೂರಿನ ರಂಭಾಪುರಿ ಪೀಠದ ಶ್ರೀಮದ್ ರಂಭಾಪುರಿ ಡಾ.ವೀರ ಸೋಮೇಶ್ವರ ಜಗದ್ಗುರುಗಳು ಯೋಗ ಮಾಡಿ ಎಲ್ಲರ ಗಮನ ಸೆಳೆದಿದರು. ದಾವಣಗೆರೆ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿರುವ ಜಗದ್ಗುರುಗಳು ದಾವಣಗೆರೆ ನಗರದ ಶ್ರೀ ರೇಣುಕಾ ಮಂದಿರದಲ್ಲಿ ಯೋಗಾಸನ ಮಾಡಿದ್ದಾರೆ.
ಪ್ರಮುಖವಾಗಿ ಅರ್ಧಕಟ್ಟಿ ಚಕ್ರಾಸಾನ, ಪ್ರಾಣಾಯಾಮ, ಸೂರ್ಯ ನಮಸ್ಕಾರ, ಶವಾಸನ ಸೇರಿದಂತೆ ವಿವಿಧ ಯೋಗದ ಆಸನಗಳನ್ನು ಜಗದ್ಗುರುಗಳು ಮಾಡಿದ್ದು, ಹಲವಾರು ವರ್ಷಗಳಿಂದ ನಿರಂತರವಾಗಿ ರಂಭಾಪುರಿ ಪೀಠದ ಶ್ರೀಗಳು ಯೋಗ ಮಾಡುತ್ತಾ ಬಂದಿದ್ದು ಯೋಗಸನಾ ಕೂಡ ಶ್ರೀಗಳ ಪ್ರತಿದಿನದ ಒಂದು ಪ್ರಮುಖ ಚಟುವಟಿಕೆಗಳಲ್ಲಿ ಒಂದಾಗಿದೆ.
ಮಠಗಳ ಸ್ವಾಮೀಜಿಗಳಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಾಗೆಯೇ ರಾಯಚೂರಿನ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿಂದು 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಯೋಗಾಸನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೆಂಗಳೂರಿನ ವಿವೇಕಾನಂದ ಅಂತಾರಾಷ್ಟ್ರೀಯ ಪ್ರಕೃತಿ ಯೋಗ ನೇತೃತ್ವದಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಯಿತು. ಶ್ರೀ ಮಠದ ಆವರಣದಲ್ಲಿ ಸ್ವಾಮೀಜಿಗಳು ಮತ್ತು ವಿದ್ಯಾರ್ಥಿಗಳು, ಭಕ್ತಾದಿಗಳು ಮತ್ತು ಸಿಬ್ಬಂದಿ ವರ್ಗ ನಾನಾ ಆಸನಗಳನ್ನ ಮಾಡಿದರು.