ಕರ್ನಾಟಕ

karnataka

ETV Bharat / state

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸಲು ಆಗ್ರಹ

ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹೆಚ್​​​​.ಹೆಚ್​​. ದೇವರಾಜು ಆಗ್ರಹಿಸಿದ್ದಾರೆ.

JDS state head HH Devaraju insist to reduce Petrol tax
ಚಿಕ್ಕಮಗಳೂರು

By

Published : Jun 25, 2020, 6:28 PM IST

ಚಿಕ್ಕಮಗಳೂರು:ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಪ್ರತಿ ನಿತ್ಯ ಪೈಸೆ ಲೆಕ್ಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸುತ್ತಿದ್ದು, ಜನ ಸಾಮಾನ್ಯರಿಗೆ ಹೆಚ್ಚಿನ ಹೊರೆ ಹೊರಿಸುತ್ತಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹೆಚ್​​​​.ಹೆಚ್​​. ದೇವರಾಜು ಆರೋಪಿಸಿದ್ದಾರೆ.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹೆಚ್​​​​​ಹೆಚ್​​​​​ ದೇವರಾಜು

ಕಳೆದ 15 ದಿನಗಳಲ್ಲಿ ಸರಾಸರಿ 10 ರೂಪಾಯಿವರೆಗೂ ಕೇಂದ್ರ ಸರ್ಕಾರ ಪೆಟ್ರೋಲ್​​, ಡೀಸೆಲ್​ ದರ ಏರಿಕೆ ಮಾಡಿದ್ದು ಜನ ಸಾಮಾನ್ಯನ ಜೀವನದ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ಕೇಂದ್ರ ಸರ್ಕಾರದ ಈ ನೀತಿಯನ್ನು ಜೆಡಿಎಸ್ ಪಕ್ಷ ಖಂಡಿಸುತ್ತಿದ್ದು, ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹಾಕಿರುವಂತ ಎಲ್ಲಾ ಟ್ಯಾಕ್ಸ್​​​​​​​​​​ಗಳನ್ನು ತೆಗೆಯಬೇಕು ಎಂದು ಆಗ್ರಹಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ 3-4 ವರ್ಷಗಳಿಂದ ದೂರವಾಣಿ ಸಂಪರ್ಕ ಅವ್ಯವಸ್ಥೆಯಿಂದ ಕೂಡಿದ್ದು ಸಂಪೂರ್ಣ ಸ್ತಬ್ಧವಾಗಿದೆ. ಮೊಬೈಲ್ ಮತ್ತು ಇಂಟರ್ನೆಟ್ ವ್ಯವಸ್ಥೆ ಕೂಡಾ ಸರಿಯಿಲ್ಲ. ಇದರಿಂದ ಜನಸಾಮಾನ್ಯರಿಗೆ, ವಿದ್ಯಾರ್ಥಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಈ ಬಗ್ಗೆ ಸಂಸತ್ ಸದಸ್ಯರು ಗಮನ ಹರಿಸುತ್ತಿಲ್ಲ. ಕೂಡಲೇ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ದೂರವಾಣಿ ವಿನಿಮಯ ಕೇಂದ್ರಗಳನ್ನು ಸರಿಪಡಿಸದಿದ್ದರೆ, ಮುಂದಿನ ದಿನಗಳಲ್ಲಿ ದೂರವಾಣಿ ಕೇಂದ್ರಗಳಿಗೆ ಬೀಗ ಹಾಕುವ ಕೆಲಸ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ABOUT THE AUTHOR

...view details