ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು ಎಂದು ಜಿಲ್ಲೆಯ ಕಡೂರು ತಾಲೂಕಿನ ಜ್ಞಾನಪ್ರಭು ಶ್ರೀ ಗುರು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ ಆಗ್ರಹಿಸಿದ್ದಾರೆ.
ಸಿಎಂ ಬಿಎಸ್ವೈ ಬದಲಾವಣೆ ಮಾಡಬಾರದು: ದೇಶಿಕೇಂದ್ರ ಸ್ವಾಮೀಜಿ ಒತ್ತಾಯ - ಚಿಕ್ಕಮಗಳೂರು ನ್ಯೂಸ್
ಯಡಿಯೂರಪ್ಪ ಅವರು ದಕ್ಷ, ಪ್ರಾಮಾಣಿಕ, ಸಮರ್ಥ, ನಾಯಕ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಇಂತಹ ವ್ಯಕ್ತಿಯನ್ನು ಅಧಿಕಾರದಿಂದ ಕೆಳಗಿಳಿಸುವುದು ಸರಿಯಲ್ಲ. ಮುಖ್ಯಮಂತ್ರಿ ಬದಲಾವಣೆ ಮಾಡಬಾರದು ಎಂದು ಜ್ಞಾನಪ್ರಭು ಶ್ರೀ ಗುರು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ ಆಗ್ರಹಿಸಿದ್ದಾರೆ.
ದಕ್ಷ, ಪ್ರಾಮಾಣಿಕ, ಸಮರ್ಥ, ನಾಯಕ ಬಿ.ಎಸ್. ಯಡಿಯೂರಪ್ಪ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಇಂತಹ ವ್ಯಕ್ತಿಯನ್ನು ಅಧಿಕಾರದಿಂದ ಕೆಳಗಿಳಿಸುವುದು ಸರಿಯಲ್ಲ. ಕಳೆದ ಎರಡು ವರ್ಷಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿರುವುದನ್ನು ಲೆಕ್ಕಿಸದೇ, ನಾಡಿಗಾಗಿ ಅವರು ಹೋರಾಟ ಮಾಡಿದ್ದಾರೆ. ಈ ಬಗ್ಗೆ ಹೈಕಮಾಂಡ್ ಮನಗಾಣಬೇಕು ಎಂದು ಒತ್ತಾಯಿಸಿದರು.
ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗಲೆಲ್ಲಾ ತೊಂದರೆಗಳನ್ನು ನೀಡಿರುವುದನ್ನು ನಾವು ನೋಡಿದ್ದೇವೆ. ಅವರಿಗೆ ಪೂರ್ಣವಾದ ಅವಕಾಶ ನೀಡಬೇಕು. ಎರಡು ಬಾರಿಯೂ ಬಿಜೆಪಿ ಬಹುಮತ ಪಡೆಯಲಿಲ್ಲ, ಆದರೆ, ಎಲ್ಲರನ್ನು ಒಗ್ಗೂಡಿಸಿಕೊಂಡು ದಕ್ಷತೆಯಿಂದ ಯಡಿಯೂರಪ್ಪ ಆಡಳಿತ ನಡೆಸಿಕೊಂಡು ಬಂದಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡಬಾರದು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ.