ಚಿಕ್ಕಮಗಳೂರು:ಕೊರೊನಾ ಮಹಾಮಾರಿಗೆ ಜಿಲ್ಲೆಯ ಪತ್ರಕರ್ತರೊಬ್ಬರು ಬಲಿಯಾಗಿದ್ದಾರೆ.
ಚಿಕ್ಕಮಗಳೂರು: ಕೊರೊನಾ ಸೋಂಕಿಗೆ ಪತ್ರಕರ್ತ ಬಲಿ - ಚಿಕ್ಕಮಗಳೂರು ಲೇಟೆಸ್ಟ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಪತ್ರಿಕೆಯೊಂದರ ವರದಿಗಾರರೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಜಿಲ್ಲೆಯ ಕೊಪ್ಪ ತಾಲೂಕಿನ ಪತ್ರಿಕೆಯೊಂದರ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಾಧಿಕ್ (47) ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಾಧಿಕ್ ಕಳೆದ ವಾರ ಉಸಿರಾಟ ಸಮಸ್ಯೆಯಿಂದ ಸರ್ಕಾರಿ ಆಸ್ವತ್ರೆಗೆ ದಾಖಲಾಗಿದ್ದರು. ಈ ವೇಳೆ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತರು ಕೊಪ್ಪದ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿದ್ದರು.
ಇದನ್ನೂ ಓದಿ:ದಾವಣಗೆರೆ: ಕೋವಿಡ್ ಆರ್ಭಟ ತಗ್ಗಿಸಲು ಮುಂದಾದ ವಿದ್ಯಾರ್ಥಿನಿ!