ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: SSLC ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳು - ಜಗದೀಶ್ವರ ಇಂಗ್ಲಿಷ್ ಮೀಡಿಯಂ ಶಾಲೆ

ಕಳಸ ತಾಲೂಕಿನ ಜಗದೀಶ್ವರ್​ ಇಂಗ್ಲಿಷ್​ ಮೀಡಿಯಂ ಶಾಲೆಯ ಇಬ್ಬರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಪೋಷಕರ ಹರ್ಷಕ್ಕೆ ಕಾರಣರಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆ ತಾಲೂಕಿನ ಜನರ ಮೆಚ್ಚುಗೆಗೆ ಕಾರಣವಾಗಿದೆ.

kalasa-taluk-two-student-got-625-marks-out-of-625
sslc ಪರೀಕ್ಷೆ

By

Published : Aug 9, 2021, 9:50 PM IST

ಚಿಕ್ಕಮಗಳೂರು: ಹತ್ತನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, 625 ಕ್ಕೆ 625 ಅಂಕ ಪಡೆಯುವ ಮೂಲಕ ಎಸ್​​ಎಸ್​ಎಲ್​ಸಿ ವಿದ್ಯಾರ್ಥಿಗಳಿಬ್ಬರು ಜಿಲ್ಲೆಯ ಕಳಸ ತಾಲೂಕಿಗೆ ಕೀರ್ತಿ ತಂದಿದ್ದಾರೆ.

sslc ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳು

ಕಳಸ ನಗರದ ಜಗದೀಶ್ವರ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳಾದ ಪವನ್ ಮತ್ತು ಆಧ್ಯಾ 625 ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು. ಕೃಷಿಕ ಅರವಿಂದ್​ ಹಾಗೂ ಅಮೃತ ಅವರ ಪುತ್ರ ಪವನ್​ ಸಾಧನೆಗೆ ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ. ಇನ್ನು ಛಾಯಾಗ್ರಾಹಕ ವಾಸು ಹಾಗೂ ಜಯಂತಿ ಪುತ್ರಿ ಆಧ್ಯಾಳ ಸಾಧನೆ ತಂದೆ ತಾಯಿಯ ಸಂತೋಷಕ್ಕೆ ಕಾರಣವಾಗಿದೆ.

ABOUT THE AUTHOR

...view details