ಕರ್ನಾಟಕ

karnataka

By

Published : Oct 28, 2022, 2:20 PM IST

ETV Bharat / state

ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕೋಟಿ ಕಂಠ ಗಾಯನ: ಶಾಸಕ ಸಿ ಟಿ ರವಿ ಸಖತ್​ ಡ್ಯಾನ್ಸ್

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಸಿ ಟಿ ರವಿ ಸಖತ್ ಸ್ಟೆಪ್ ಹಾಕಿದ್ದು, ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಕಾಫಿನಾಡು ಚಂದು ಈ ಕಾರ್ಯಕ್ರಮಕ್ಕೆ ಸಾಥ್ ನೀಡಿದ್ದು, ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲೂ ಕೋಟಿ ಕಂಠ ಗಾಯನ ಮೊಳಗಿದೆ.

Kannada Rajyotsava Kotikantha Singing
ಶಾಸಕ ಸಿ ಟಿ ರವಿ ಸಖತ್​ ಡ್ಯಾನ್ಸ್

ಚಿಕ್ಕಮಗಳೂರು:67ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಚಿಕ್ಕಮಗಳೂರು ಜಿಲ್ಲೆಯ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಮತ್ತು ‌ಚಿಕ್ಕಮಗಳೂರು ಶಾಸಕ ಸಿ ಟಿ ರವಿ ಅವರು ಸೇರಿದ್ದ ಸಮೂಹದ ಜೊತೆ ಕನ್ನಡದ ಗೀತೆಗಳನ್ನು ಹಾಡುವ ಮೂಲಕ ಮಹಾ ಅಭಿಯಾನಕ್ಕೆ ‌ಚಾಲನೆ ನೀಡಿದರು.

ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕೋಟಿಕಂಠ ಗಾಯನ

ಅದ್ದೂರಿಯಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆದಿದ್ದು, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಸಿ ಟಿ ರವಿ ಸಖತ್ ಸ್ಟೆಪ್ ಹಾಕಿದ್ದಾರೆ. ಸಿ ಟಿ ರವಿ, ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಕಾಫಿನಾಡು ಚಂದು ಈ ಕಾರ್ಯಕ್ರಮಕ್ಕೆ ಸಾಥ್ ನೀಡಿದ್ದು, ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲೂ ಕೋಟಿ ಕಂಠ ಗಾಯನ ಮೊಳಗಿದೆ.

ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕೋಟಿಕಂಠ ಗಾಯನ

ಜಿಲ್ಲಾ ಆಟದ ಮೈದಾನದಲ್ಲಿ ಕೋಟಿ ಗಾಯನ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಸಾವಿರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದು ವಿಶೇಷವಾಗಿತ್ತು. ಅಣ್ಣಾವ್ರ ಹಾಡಿಗೆ ಚಿಕ್ಕಮಗಳೂರು ಜಿಲ್ಲೆ ಬಿಜೆಪಿ ಮುಖಂಡರು ಕುಣಿದು ಕುಪ್ಪಳಿಸಿದ್ದು, ಜಿಲ್ಲಾಧಿಕಾರಿ ಹೆಚ್ ಎನ್ ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು,‌ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ಶಿಕ್ಷಕರ, ವಿದ್ಯಾರ್ಥಿಗಳು, ಅಧಿಕಾರಿ ವರ್ಗದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:ಸಿದ್ದಗಂಗಾ ಮಠದಲ್ಲಿ ಸಾವಿರಾರು ವಿದ್ಯಾರ್ಥಿಗಳಿಂದ ಕೋಟಿ ಕಂಠ ಗಾಯನ

ABOUT THE AUTHOR

...view details