ಚಿಕ್ಕಮಗಳೂರು:ಶೃಂಗೇರಿಯಲ್ಲಿ ಅಪ್ರಾಪ್ತೆ ಹಾಗೂ ಮೂಡಿಗೆರೆ ತಾಲೂಕಿನ ಆವತಿಯಲ್ಲಿ ಮಹಿಳೆ ಮೇಲಿನ ಅತ್ಯಾಚಾರ ಖಂಡಿಸಿ ಕರವೇ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಕಾರ್ಯಕರ್ತರು, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.