ಕರ್ನಾಟಕ

karnataka

ETV Bharat / state

ಪುತ್ರಿಯ ಅಂಗಾಂಗ ದಾನ: ರಕ್ಷಿತಾ ಕುಟುಂಬಕ್ಕೆ 8 ಲಕ್ಷ ರೂ ಪರಿಹಾರ ಘೋಷಿಸಿದ ಸರ್ಕಾರ

ಸಾವಿನಲ್ಲೂ ಸಾರ್ಥಕತೆ ಮೆರೆದ ವಿದ್ಯಾರ್ಥಿನಿ ರಕ್ಷಿತಾ ಕುಟುಂಬಕ್ಕೆ ಸರ್ಕಾರ 8 ಲಕ್ಷ ರೂ ಪರಿಹಾರ ಘೋಷಿಸಿದೆ.

ಪುತ್ರಿಯ ಅಂಗಾಂಗ ದಾನ
ಪುತ್ರಿಯ ಅಂಗಾಂಗ ದಾನ

By

Published : Sep 23, 2022, 10:48 PM IST

ಚಿಕ್ಕಮಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡಾದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರಕ್ಷಿತಾ ಕುಟುಂಬಕ್ಕೆ ರಾಜ್ಯ ಸರ್ಕಾರ ಎಂಟು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

ಚಿಕ್ಕಮಗಳೂರು ನಗರದ ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜಿನಲ್ಲಿ ಮೊದಲ ಪಿಯುಸಿ ಓದುತ್ತಿದ್ದ 18 ವರ್ಷದ ಯುವತಿ ರಕ್ಷಿತಾ, ಐದು ದಿನಗಳ ಹಿಂದೆ ಸರ್ಕಾರಿ ಬಸ್‍ನಿಂದ ಇಳಿಯುವಾಗ ಆಯಾ ತಪ್ಪಿ ಬಿದ್ದ ಕಾರಣ ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿತ್ತು. ಕೂಡಲೇ ಆಸ್ಪತ್ರೆಗೆ ಸೇರಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹಾಗಾಗಿ, ರಕ್ಷಿತಾ ಪೋಷಕರು ಆಕೆಯ ಸಾವಿನ ನೋವಿನಲ್ಲೂ ಆಕೆಯ ಅಂಗಾಂಗಗಳನ್ನು ದಾನ ಮಾಡಿದ್ದರು.

ರಕ್ಷಿತಾ ಕುಟುಂಬಕ್ಕೆ ಪರಿಹಾರ

ಆಕೆಯ ಅಂಗಾಂಗಳಿಂದ 9 ಜನರ ಜೀವ ಉಳಿದಿದೆ. ಹಾಗಾಗಿ, ಸರ್ಕಾರ ಆಕೆಯ ಕುಟುಂಬಕ್ಕೆ ಪರಿಹಾರ ಎನ್ನುವುದಕ್ಕಿಂತ ಗೌರವಯುತವಾಗಿ ಎಂಟು ಲಕ್ಷ ರೂ. ಹಣವನ್ನು ನೀಡಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ರೂ, ತಾಂಡಾ ಅಭಿವೃದ್ಧಿ ನಿಗಮದಿಂದ 1 ಲಕ್ಷ ರೂ ಹಾಗೂ ಉದ್ಯಮಶೀಲತೆ ಯೋಜನೆಯಡಿ 2 ಲಕ್ಷ ರೂ ಹಣವನ್ನು ಸರ್ಕಾರ ಮಂಜೂರು ಮಾಡಿದೆ. ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಕುಡುಚಿ ಶಾಸಕ ಪಿ.ರಾಜೀವ್ ಅವರು ಕಡೂರಿನ ಸೋಮನಹಳ್ಳಿ ತಾಂಡಾದ ರಕ್ಷಿತಾ ಮನೆಗೆ ಭೇಟಿ ನೀಡಿ ತಾಂಡ ಅಭಿವೃದ್ಧಿ ನಿಗಮದ ಒಂದು ಲಕ್ಷ ರೂ. ಹಾಗೂ ಉದ್ಯಮಶೀಲತೆ ಯೋಜನೆಯಡಿಯ 2 ಲಕ್ಷ ಸೇರಿ ಒಟ್ಟು ಮೂರು ಲಕ್ಷ ರೂ. ಹಣದ ಚೆಕ್ ನೀಡಲಿದ್ದಾರೆ.

ರಕ್ಷಿತಾ ಕುಟುಂಬಕ್ಕೆ ಪರಿಹಾರ

(ಓದಿ: ಮೆದುಳು ನಿಷ್ಕ್ರಿಯಗೊಂಡಿದ್ದ ಯುವತಿಯ ಅಂಗಾಂಗಗಳ ಕಸಿ ಪ್ರಕ್ರಿಯೆ ಆರಂಭ.. ಹೆಲಿಕಾಪ್ಟರ್​ನಲ್ಲಿ ಬೆಂಗಳೂರಿಗೆ ಹೃದಯ ರವಾನೆ)

ABOUT THE AUTHOR

...view details