ಚಿಕ್ಕಮಗಳೂರು:ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಅವರು ಸಿದ್ದರಾಮೋತ್ಸವ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಕಿಸಾನ್ ಕಾಂಗ್ರೆಸ್ ಒತ್ತಾಯ - ಈಟಿವಿ ಭಾರತ್ ಕನ್ನಡ
2023ರ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಿಂದ ಸ್ಪರ್ಧಿಸುವಂತೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ಒತ್ತಾಯಿಸಿದೆ.
ಸಿದ್ದರಾಮಯ್ಯ
ಇಂದಿರಾ ಗಾಂಧಿಗೆ ಪುನರ್ಜನ್ಮ ನೀಡಿದ್ದ ಕ್ಷೇತ್ರವಾದ್ದರಿಂದ ಚಿಕ್ಕಮಗಳೂರಲ್ಲೇ ಸ್ಪರ್ಧಿಸಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಗೆಲುವಿನಿಂದ ಪುನರ್ಜನ್ಮವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ದ ಸ್ಪರ್ಧಿಸುವಂತೆ ಕಿಸಾನ್ ಕಾಂಗ್ರೆಸ್ ಮನವಿ ಮಾಡಿದೆ.
ಇದನ್ನೂ ಓದಿ:ಮೋದಿ ದೂರದೃಷ್ಟಿ ನಾಯಕ, ಅಮಿತ್ ಶಾ ದಕ್ಷ ನಾಯಕ: ಸಿಎಂ ಬೊಮ್ಮಾಯಿ ಬಣ್ಣನೆ