ಚಿಕ್ಕಮಗಳೂರು:ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಶೈಲಿಯನ್ನು ಗಮನದಲ್ಲಿ ಇಟ್ಟುಕೊಂಡು, ಸಿಎಂ ಬೊಮ್ಮಾಯಿ ಮಾರ್ಗದರ್ಶನದಲ್ಲಿ ಉಪಚುನಾವಣೆ ಎದುರಿಸಿ ಗೆಲ್ಲುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆಯ ಮಾತುಗಳನ್ನಾಡಿದರು.
'ಮೋದಿ ಕಾರ್ಯಶೈಲಿ, ಬಿಎಸ್ವೈ, ಬೊಮ್ಮಾಯಿ ಮಾರ್ಗದರ್ಶನದಲ್ಲಿ ಉಪಚುನಾವಣೆ ಗೆಲ್ಲುತ್ತೇವೆ' - ಕೋಟ ಶ್ರೀನಿವಾಸ ಪೂಜಾರಿ
ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ಕಳೆದ ಬಾರಿ ಗೆಲುವು ಸಾಧಿಸಿದಂತೆ ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕೋಟ ಶ್ರೀನಿವಾಸ ಪೂಜಾರಿ
ಕಳೆದ ಉಪಚುನಾವಣೆಯಂತೆ ಈ ಬಾರಿಯ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಜನಸಾಮಾನ್ಯರಂತೆ ರಸ್ತೆ ಬದಿಯಲ್ಲಿದ್ದ ಹೋಟೆಲ್ನಲ್ಲಿ ಕುಳಿತು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಜನಪ್ರಿಯ ನೀರು ದೋಸೆ ತಿನ್ನುವ ಮೂಲಕ ಸಚಿವ ಕೋಟ ಸರಳತೆ ಮೆರೆದರು.