ಚಿಕ್ಕಮಗಳೂರು:ಮೀನುಗಾರಿಕೆಗೆ ತೆರಳಿದ್ದ ನಾಲ್ವರು ಕಣ್ಮರೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಮಠದಲ್ಲಿ ಮೀನುಗಾರಿಕೆ ಹಾಗೂ ಒಳ ಬಂದರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿದ್ದು, ಈಗಾಗಲೇ ಓರ್ವನ ಮೃತದೇಹ ಪತ್ತೆಯಾಗಿದೆ ಎಂದರು.
ಮೀನುಗಾರಿಕೆಗೆ ತೆರಳಿದ್ದವರು ಕಣ್ಮರೆ: ಓರ್ವನ ಮೃತದೇಹ ಪತ್ತೆ, ಉಳಿದವರಿಗಾಗಿ ಶೋಧ - ಶೋಧ ಕಾರ್ಯ
ಮೀನುಗಾರಿಕೆಗೆ ತೆರಳಿದ್ದ ನಾಲ್ವರು ಕಣ್ಮರೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಓರ್ವನ ಮೃತದೇಹ ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಶೀಘ್ರವೇ ಕಣ್ಮರೆಯಾಗಿರುವವರ ಹಾಗೂ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಲಾಗುವುದು. ಕಣ್ಮರೆಯಾದವರ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದ್ದು, ಆ ಕುಟುಂಬದವರಿಗೆ ಧೈರ್ಯ ಹೇಳುವ ಕೆಲಸ ನಡೆಯುತ್ತಿದೆ ಎಂದರು.
ಶೋಧ ಕಾರ್ಯದಲ್ಲಿ ಇಡೀ ಜಿಲ್ಲಾಡಳಿತವೇ ಭಾಗವಹಿಸಿದ್ದು, ಮೃತರ ಕುಟುಂಬದವರಿಗೆ ಹಾಗೂ ಕಣ್ಮರೆಯಾದ ಕುಟುಂಬದವರಿಗೆ ಪರಿಹಾರ ನೀಡಲಾಗುವುದು. ಸರ್ಕಾರದಿಂದ ನೀಡುವ 6 ಲಕ್ಷ ಪರಿಹಾರದ ಹಣವನ್ನು ಸಂಪೂರ್ಣವಾಗಿ ಕುಟುಂಬಕ್ಕೆ ನೀಡಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಮಠದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.