ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈ ದಿನ 177 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ, 8,594 ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು: 117 ಹೊಸ ಕೋವಿಡ್ ಪ್ರಕರಣ, 136 ಜನರು ಗುಣಮುಖ - ಚಿಕ್ಕಮಗಳೂರಿನಲ್ಲಿ ಕೊರೊನಾ ಪ್ರಕರಣ ಏರಿಕೆ ನ್ಯೂಸ್
ಇಂದು ಚಿಕ್ಕಮಗಳೂರಿನಲ್ಲಿ 117 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು,ಇವತ್ತು 136 ಜನರು ಗುಣಮುಖರಾಗಿ ವಿವಿಧ ಕೋವಿಡ್ ಕೇರ್ ಸೆಂಟರ್ ಮತ್ತು ಕೋವಿಡ್ ಆಸ್ಪತ್ರೆಗಳಿಂದ ತೆರಳಿದ್ದಾರೆ.
ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 136 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು , ಈವರೆಗೂ ಜಿಲ್ಲೆಯಲ್ಲಿ ಒಟ್ಟು 6.772 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾದಂತಾಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 85, ಕಡೂರು ತಾಲೂಕಿನಲ್ಲಿ 46, ತರೀಕೆರೆ ತಾಲೂಕಿನಲ್ಲಿ 17, ಶೃಂಗೇರಿ ತಾಲೂಕಿನಲ್ಲಿ 03, ಮೂಡಿಗೆರೆ ತಾಲೂಕಿನಲ್ಲಿ 17 ಕೊಪ್ಪ ತಾಲೂಕಿನಲ್ಲಿ 09 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇವತ್ತು ಸೋಂಕಿಗೆ ಒಬ್ಬರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 119 ಕ್ಕೆ ಏರಿಕೆಯಾಗಿದೆ.
ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ, ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಸದ್ಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 1,567 ಸಕ್ರಿಯ ಪ್ರಕರಣಗಳಿವೆ..