ಚಿಕ್ಕಮಗಳೂರು:ಕರ್ತವ್ಯದಲಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೂಡಿಗೆರೆಯಲ್ಲಿ ಸೋಮವಾರ ನಡೆದಿದೆ. ಕೊಪ್ಪಳ ಮೂಲದ ರವಿ ಲಮಾಣಿ (45) ಮೃತರು.
ಚಿಕ್ಕಮಗಳೂರು: ಕರ್ತವ್ಯದಲ್ಲಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕ ಹೃದಯಾಘಾತದಿಂದ ಸಾವು
ಕರ್ತವ್ಯದಲ್ಲಿರುವಾಗಲೇ ಕೆಎಸ್ಆರ್ಟಿಸಿ ಬಸ್ ಚಾಲಕ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರುವ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.
Published : Dec 4, 2023, 10:57 PM IST
ಮೂಡಿಗೆರೆಯಿಂದ ಗುತ್ತಿಹಳ್ಳಿ ಮಾರ್ಗವಾಗಿ ಹೆಸಗೋಡು ಗ್ರಾಮಕ್ಕೆ ಬಸ್ ಚಲಾಯಿಸಿಕೊಂಡು ಹೋಗುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಸಮಯಪ್ರಜ್ಞೆ ಮೆರೆದ ಚಾಲಕ ರವಿ ಬಸ್ಸನ್ನು ಹೆಸಗೋಡು ಗ್ರಾಮದಲ್ಲಿ ನಿಲ್ಲಿಸಿದ್ದಾರೆ. ಕೊಡಲೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಚಾಲಕ ರವಿ ಲಮಾಣಿ ಸಾವನ್ನಪ್ಪಿದ್ದಾರೆ. ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ:ಹೃದಯಾಘಾತದಿಂದ ಕಳಸ ಠಾಣೆಯ ಎಎಸ್ಐ ಸಾವು