ಚಿಕ್ಕಮಗಳೂರು:ಚಾರ್ಮಾಡಿ ಘಾಟಿಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿ ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಕೆಎಸ್ಆರ್ಟಿಸಿ ಮಿನಿ ಬಸ್ಗೆ ಮಾತ್ರ ಅನುಮತಿ ಇತ್ತು. ಇದೀಗ 2 ವರ್ಷಗಳ ಬಳಿಕ ಎಲ್ಲಾ ಬಸ್ ಸಂಚಾರ ಆರಂಭವಾಗಿದ್ದು, ಬಸ್ ಹಾಗೂ 6 ಚಕ್ರದ ಲಾರಿ, ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
2 ವರ್ಷದಿಂದ ಲಘು ವಾಹನಗಳಿಗಷ್ಟೇ ಚಾರ್ಮಾಡಿ ಘಾಟ್ನಲ್ಲಿ ಸಂಚಾರ ಮೀಸಲಾಗಿತ್ತು. 6 ಚಕ್ರ ಮೇಲ್ಪಟ್ಟ ವಾಹನಗಳಿಗೆ ನಿರ್ಬಂಧ ಹೇರಲಾಗಿತ್ತು. ಆದರೆ ಈಗ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಭಾರೀ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಭೂ ಕುಸಿತ ಉಂಟಾಗಿತ್ತು. ಇದರಿಂದಾಗಿ ಬಸ್ ಸಂಚಾರ ನಿಷೇಧಿಸಲಾಗಿತ್ತು. ಇದೀಗ ಚಿಕ್ಕಮಗಳೂರು-ಮಂಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವಂತಹ ಘಾಟಿ ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿರುವುದು ಸ್ಥಳೀಯರು ನಿಟ್ಟುಸಿರು ಬಿಡುವಂತಾಗಿದೆ.