ಕರ್ನಾಟಕ

karnataka

ETV Bharat / state

ಮುಂದುವರೆದ ಸಾರಿಗೆ‌ ನೌಕರರ ಪ್ರತಿಭಟನೆ: ಸರ್ಕಾರದ ವಿರುದ್ಧ ಆಕ್ರೋಶ

ಪ್ರತಿಭಟನೆಯಲ್ಲಿ ಸಾರಿಗೆ ನೌಕರರ ಚಿಕ್ಕ ಚಿಕ್ಕ ಮಕ್ಕಳು, ವಯೋವೃದ್ಧರು ಸೇರಿದಂತೆ ಮಹಿಳೆಯರು ಭಾಗಿಯಾಗಿದ್ದು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Ksrtc protest
Ksrtc protest

By

Published : Apr 11, 2021, 7:40 PM IST

ಚಿಕ್ಕಮಗಳೂರು: 6ನೇ ವೇತನ ಜಾರಿಗಾಗಿ ಸಾರಿಗೆ ಸಿಬ್ಬಂದಿ ಹಮ್ಮಿಕೊಂಡಿರುವ ಮುಷ್ಕರ ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟಿದೆ.

ಸರ್ಕಾರ ಕೊಡಲು ಮುಂದೆ ಬರುತ್ತಿಲ್ಲ. ಇವರು ಬಿಡಲು ಒಪ್ಪುತ್ತಿಲ್ಲ ಎಂಬಂತಾಗಿದ್ದು, ಇದರ ಮಧ್ಯೆ ಸಾರ್ವಜನಿಕರು ಬಸ್​​ಗಳಿಲ್ಲದೆ ಹೈರಾಣಾಗಿ ಹೋಗಿದ್ದಾರೆ.

ಸರ್ಕಾರದ ಈ ನೀತಿಯನ್ನು ಖಂಡಿಸಿ ಚಿಕ್ಕಮಗಳೂರಿನ ಸಾರಿಗೆ ನೌಕರರು ನಗರದ ಕೋರ್ಟ್ ಆವರಣದ ಪಕ್ಕದಲ್ಲಿರುವ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಕುಟುಂಬ ಸದಸ್ಯರೊಂದಿಗೆ ಸಾರಿಗೆ ನೌಕರರು ಪ್ರತಿಭಟನೆ ಮಾಡುತ್ತಿದ್ದಾರೆ.

ಈ ಪ್ರತಿಭಟನೆಯಲ್ಲಿ ಸಾರಿಗೆ ನೌಕರರ ಚಿಕ್ಕ ಚಿಕ್ಕ ಮಕ್ಕಳು, ವಯೋವೃದ್ಧರು ಸೇರಿದಂತೆ ಮಹಿಳೆಯರು ಭಾಗಿಯಾಗಿದ್ದು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ಕರ್ತವ್ಯಕ್ಕೆ ಮರಳಲ್ಲ ಎಂದು ಪಟ್ಟು ಹಿಡಿದಿದ್ದು, ಕರ್ತವ್ಯಕ್ಕೆ ಹಾಜರಾಗದೇ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

ABOUT THE AUTHOR

...view details