ಚಿಕ್ಕಮಗಳೂರು: ಅಖಿಲ ಭಾರತ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ಮುಷ್ಕರಕ್ಕೆ ಬೆಂಬಲ ವ್ಯಕ್ತವಾದರೂ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅಖಿಲ ಭಾರತ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳ ಕರೆ: ಕಾಫಿನಾಡಿನಲ್ಲಿ ಮಿಶ್ರ ಪ್ರತಿಕ್ರಿಯೆ - ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ
ಅಖಿಲ ಭಾರತ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ಮುಷ್ಕರಕ್ಕೆ ಬೆಂಬಲ ವ್ಯಕ್ತವಾದರೂ ಮಿಶ್ರ ಪ್ರತಿಕ್ರಿಯೆ ಬರುತ್ತಿದೆ.
ಎಐಟಿಯುಸಿ, ಐಎನ್ ಟಿಯುಸಿ, ಯುಟಿಯುಸಿ, ಎಲ್.ಐ.ಸಿ ಬ್ಯಾಂಕ್ ಸಂಘಟನೆಗಳು, ರೈತ ಸಂಘ ಸೇರಿ ಹತ್ತಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ ನೀಡಲಿದ್ದು, ಆದರೇ ಚಿಕ್ಕಮಗಳೂರಿನ ಜನರಿಗೆ ಯಾವುದೇ ಬಂದ್ ಬಿಸಿ ತಟ್ಟಿಲ್ಲ. ಬೆಳಿಗ್ಗೆ 11ಗಂಟೆಗೆ ವಿವಿಧ ಸಂಘಟನೆಗಳು ಪ್ರತಿಭಟನೆ ಮಾಡಲಿದ್ದು ಮೆಸ್ಕಾಂ ಕಚೇರಿಯಿಂದ ಅಜಾದ್ ಪಾರ್ಕ್ ವೃತ್ತದವರೆಗೂ ಪ್ರತಿಭಟನಾ ಜಾಥಾ ನಡೆಸಲಿದ್ದಾರೆ. ಎಂದಿನಂತೆ ಹೋಟೆಲ್, ಅಂಗಡಿ ಮುಂಗಟ್ಟುಗಳು ಕಾರ್ಯ ನಿರ್ವಹಿಸುತಿದ್ದು, ನಿಧಾನವಾಗಿ ಅಂಗಡಿಗಳು ತೆರೆದು ಕೊಳ್ಳುತ್ತಿವೆ. ಎಂದಿನಂತೆ ಸರ್ಕಾರಿ, ಖಾಸಗಿ ಬಸ್ ಸಂಚಾರ ಆರಂಭ ಆಗಿದ್ದು, ಮುಷ್ಕರದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಇಂದು ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.