ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಕಾರ್ಮಿಕ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಅರಣ್ಯ ಇಲಾಖೆ ಮುಂದೆ ಮೃತ ದೇಹವಿಟ್ಟು ಜನರು ಪ್ರತಿಭಟಿಸಿರುವ ಘಟನೆ ನಡೆದಿದೆ.
ಅರಣ್ಯ ಇಲಾಖೆ ಎದುರು ಪ್ರತಿಭಟನೆ: ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದಲ್ಲಿ ನಿನ್ನೆ ತೋಟದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿಯಿಂದಾಗಿ ಅರ್ಜುನ್ ಎಂಬ ಕಾರ್ಮಿಕರೊಬ್ಬರು ಮೃತಪಟ್ಟಿದ್ದರು. ಈ ನಿಟ್ಟಿನಲ್ಲಿ ಕೂಡಲೇ ಕಾಡಾನೆ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿ ಅರಣ್ಯ ಇಲಾಖೆ ಎದುರು ಪ್ರತಿಭಟನೆ ನಡೆಸಿದ್ದಾರೆ.