ಚಿಕ್ಕಮಗಳೂರು:ಜಮೀನು ವಿವಾದ ಹಿನ್ನೆಲೆ, ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಜಡಕನ ಕಟ್ಟೆ ಗ್ರಾಮದಲ್ಲಿ ನಡೆದಿದೆ.
ಜಮೀನು ವಿವಾದ.. ಎರಡು ಕುಟುಂಬಗಳ ನಡುವೆ ಮಾರಾಮಾರಿ - ಚಿಕ್ಕಮಗಳೂರು ಸುದ್ದಿ
ಜಮೀನು ವಿವಾದ ಹಿನ್ನೆಲೆ, ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಜಡಕನ ಕಟ್ಟೆ ಗ್ರಾಮದಲ್ಲಿ ನಡೆದಿದೆ.
ಜಮೀನು ವಿವಾದ..ಎರಡು ಕುಟುಂಬಗಳ ನಡುವೆ ಮಾರಾಮಾರಿ
ಜಮೀನು ವಿಚಾರವಾಗಿ ವಾಟರ್ ಮ್ಯಾನ್ ತಿಮ್ಮಪ್ಪ ಹಾಗೂ ಶಿವಪ್ಪ ನಾಯಕ ಕುಟುಂಬಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಒಬ್ಬರಿಗೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ಖಾರದಪುಡಿ ಎರಚಿ, ದೊಣ್ಣೆ, ಮಚ್ಚುಗಳಿಂದ ಪರಸ್ಪರ ಬಡಿದಾಡಿಕೊಂಡಿದ್ದಾರೆ.
ಈ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಈ ಎರಡು ಕುಟುಂಬಗಳ ಗಲಾಟೆ ವಿಚಾರ ಕಡೂರು ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಕಡೂರು ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.