ಚಿಕ್ಕಮಗಳೂರು:ನಗರ ಸೇರಿದಂತೆ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಚಾರ್ಮಾಡಿ ಘಾಟ್ನ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಣ್ಣಿನ ಕುಸಿತ ಉಂಟಾಗಿದೆ.
ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ: ಚಾರ್ಮಾಡಿ ಘಾಟ್ ತಿರುವಿನಲ್ಲಿ ಮಣ್ಣು ಕುಸಿತ - ಚಾರ್ಮಾಡಿ ಘಾಟಿಯಲ್ಲಿ ಮಣ್ಣು ಕುಸಿತ
ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೆಲವೊಂದು ಭಾಗದಲ್ಲಿ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಘಟನೆಯೂ ನಡೆದಿದೆ. ಚಾರ್ಮಾಡಿ ಘಾಟ್ನ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಣ್ಣಿನ ಕುಸಿತ ಉಂಟಾಗಿದೆ.
ಈ ಕುಸಿತದಿಂದ ವಾಹನ ಸವಾರರು ಆತಂಕಕ್ಕೆ ಒಳಗಾಗಿದ್ದು, ಈ ಭಾಗದಲ್ಲಿ ವಾಹನ ಸಂಚಾರ ಮಾಡುವುದಕ್ಕೆ ಭಯ ಪಡುವಂತಾಗಿದೆ. ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ದೊಡ್ಡ ಪ್ರಮಾಣದಲ್ಲಿ ಈ ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ಇದಲ್ಲದೇ ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೆಲವೊಂದು ಭಾಗದಲ್ಲಿ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಘಟನೆಯೂ ನಡೆದಿದೆ.
ಜಿಲ್ಲೆಯ ಬಾಳೆಹೊನ್ನೂರು, ಕೊಪ್ಪ, ಶೃಂಗೇರಿ, ಕಳಸ, ಎನ್ ಆರ್ ಪುರ ಭಾಗದಲ್ಲಿಯೂ ಧಾರಾಕಾರ ಮಳೆಯಾಗುತ್ತಿದ್ದು, ಈ ಬಾರಿ ಆಶ್ಲೇಷ ಮಳೆ ಅಬ್ಬರಿಸುವ ಮುನ್ಸೂಚನೆ ನೀಡುತ್ತಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಲೆನಾಡು ಭಾಗದ ಜನರು ತತ್ತರಿಸಿ ಹೋಗಿದ್ದಾರೆ.