ಕರ್ನಾಟಕ

karnataka

ETV Bharat / state

ಚಿರತೆ ದಾಳಿ: ನಾಲ್ಕು ಕುರಿ ಸಾವು - ಚಿಕ್ಕಮಗಳೂರು ಅರಣ್ಯ ಇಲಾಖೆ

ಚಿಕ್ಕಮಗಳೂರು ತಾಲೂಕಿನ ಜಡಗನಹಳ್ಳಿಯ ಶಂಕರದೇವರ ಮಠದ ಬಳಿ ಚಿರತೆ ದಾಳಿಗೆ ನಾಲ್ಕು ಕುರಿಗಳು ಸಾವನ್ನಪ್ಪಿವೆ.

ಕುರಿ ಸಾವು

By

Published : Aug 5, 2019, 1:16 PM IST

ಚಿಕ್ಕಮಗಳೂರು: ಕುರಿಗಳ ಮೇಲೆ ಚಿರತೆ ದಾಳಿ ಮಾಡಿದ್ದು, ಚಿರತೆ ದಾಳಿಗೆ ನಾಲ್ಕು ಕುರಿಗಳು ಸಾವನ್ನಪ್ಪಿವೆ ಹಾಗೂ ಒಂದು ಕುರಿಯನ್ನು ಚಿರತೆ ಎಳೆದುಕೊಂಡು ಹೋಗಿದೆ.

ಚಿರತೆ ದಾಳಿ: ನಾಲ್ಕು ಕುರಿ ಸಾವು

ಚಿಕ್ಕಮಗಳೂರು ತಾಲೂಕಿನ ಜಡಗನಹಳ್ಳಿಯ ಶಂಕರದೇವರ ಮಠದ ಈ ಬಳಿ ನಿನ್ನೆ ರಾತ್ರಿ 12.30ಕ್ಕೆ ಈ ಘಟನೆ ನಡೆದಿದ್ದು, ಚಿರತೆ ದಾಳಿ ಕಂಡು ಜೀವ ಭಯದಿಂದ ಕುರಿಗಾಹಿಗಳು ಸ್ಥಳದಿಂದ ಓಡಿ ಹೋಗಿದ್ದಾಋಎ. ಓಡುವಾಗ ಬಿದ್ದು ಅವರಿಗೂ ಸಣ್ಣ-ಪುಟ್ಟ ಗಾಯಗಳಾಗಿವೆ.

ಸುಮಾರು 70 ಸಾವಿರ ಬೆಲೆ ಬಾಳುವ ಕುರಿಗಳಾಗಿದ್ದು, ಈ ಭಾಗದಲ್ಲಿ ಕರಡಿ, ಚಿರತೆ ಇವೆ ಎಂದು ಅರಣ್ಯ ಇಲಾಖೆಗೆ ಮೊದಲೇ ಸ್ಥಳೀಯರು ತಿಳಿಸಿದ್ದರು. ಮೊದಲೇ ಅರಣ್ಯ ಇಲಾಖೆಯ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳದ ಹಿನ್ನೆಲೆ ಅರಣ್ಯ ಇಲಾಖೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸತ್ತ ಕುರಿಗಳಿಗೆ ಪರಿಹಾರ ನೀಡುವಂತೆ ಅರಣ್ಯ ಇಲಾಖೆಗೆ ಆಗ್ರಹಿಸಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚಿಕ್ಕಮಗಳೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details