ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು ನಗರದ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ! - ಗೌಡನಹಳ್ಳಿ ಇಂಡಸ್ಟ್ರಿಯಲ್ ಏರಿಯಾ

ಚಿಕ್ಕಮಗಳೂರು ನಗರದ ಹೊರವಲಯದ ಗೌಡನಹಳ್ಳಿ ಇಂಡಸ್ಟ್ರಿಯಲ್ ಏರಿಯಾ ಸಮೀಪದ ರಸ್ತೆಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

leopard-found-in-chikkmagalur-outskirts
ಚಿಕ್ಕಮಗಳೂರು ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ!

By

Published : Feb 9, 2021, 5:41 PM IST

Updated : Feb 9, 2021, 6:26 PM IST

ಚಿಕ್ಕಮಗಳೂರು:ನಗರ ಹೊರವಲಯದ ಗೌಡನಹಳ್ಳಿ ಸಮೀಪ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಚಿಕ್ಕಮಗಳೂರು ನಗರದ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ!

ನಗರದ ಕೋಟೆ ಬಡಾವಣೆಯಿಂದ ಗೌಡನಹಳ್ಳಿಗೆ ಹೋಗುವ ಇಂಡಸ್ಟ್ರಿಯಲ್ ಏರಿಯಾ ಸಮೀಪದ ರಸ್ತೆಯಲ್ಲಿ ಚಿರತೆ ಸಂಚರಿಸುತ್ತಿರುವ ದೃಶ್ಯವನ್ನು ತರಕಾರಿ ಮಾರಾಟ ಮಾಡುವ ಯುವಕರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಆತಂಕಗೊಂಡಿದ್ದು, ಕೂಡಲೇ ಅರಣ್ಯ ಇಲಾಖೆ ಇತ್ತ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಈ ಭಾಗದಲ್ಲಿ ಹಲವಾರು ಬಾರಿ ಚಿರತೆ ಕಾಣಿಸಿಕೊಂಡಿತ್ತು. ಇದೀಗ ಮತ್ತೆ ಈ ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿರೋದು ಜನರ ಆತಂಕಕ್ಕೆ ಕಾರಣವಾಗಿದೆ.

Last Updated : Feb 9, 2021, 6:26 PM IST

ABOUT THE AUTHOR

...view details