ಚಿಕ್ಕಮಗಳೂರು:ಜಿಲ್ಲೆಯ ಮಲೆನಾಡು ಭಾಗದಲ್ಲಿ ಹಲವಾರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಅತಿಯಾದ ನಷ್ಟ ಉಂಟಾಗಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಭೂ ಕುಸಿತ, ಗುಡ್ಡ ಕುಸಿತ, ಮನೆಗಳ ಕುಸಿತ ಈ ರೀತಿಯ ಪ್ರಕರಣಗಳು ಸಂಭವಿಸಿವೆ. ಈ ಹಿನ್ನೆಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಈಗಾಗಲೇ ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಸಂತ್ರಸ್ತರಿಗೆ ಸಾಂತ್ವನ ಹೇಳುವ ಕೆಲಸ ಮಾಡುತ್ತಿದ್ದಾರೆ.
ಆದರೆ, ಕೊಪ್ಪ ತಾಲೂಕಿನ ಗುಡ್ಡೆ ತೋಟದಲ್ಲಿ ಸಂತ್ರಸ್ತರನ್ನು ಮಾತನಾಡಿಸದೆ ಹೋದ ಆರೋಪವನ್ನು ಸ್ಥಳೀಯರು ಮಾಡುತ್ತಿದ್ದು, ಏಕಾಏಕಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಸಂತ್ರಸ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಹೊರನಾಡು-ಶೃಂಗೇರಿ ಮಾರ್ಗದ ರಸ್ತೆ ತಡೆ ನಡೆಸಿದ್ದಾರೆ.