ಚಿಕ್ಕಮಗಳೂರು: ಕೊರೊನಾ ವೈರಸ್ ಭೀತಿ ಹಾಗೂ ಲಾಕ್ ಡೌನ್ ನಡುವೆ ಚಿಕ್ಕಮಗಳೂರು ಜಿಲ್ಲೆ ಸಂಪೂರ್ಣ ಬಂದ್ ಆಗಿತ್ತು. ಇಂದಿನಿಂದ ಚಿಕ್ಕಮಗಳೂರು ಜಿಲ್ಲೆ ಸಹಜ ಸ್ಥಿತಿಗೆ ಮರಳಿದ್ದು, ಇಂದು ಮುಂಜಾನೆಯಿಂದಲೇ ಪ್ರತಿಯೊಬ್ಬರು ರಸ್ತೆಗೆ ಇಳಿಯುವುದರ ಮೂಲಕ, ತಮ್ಮ ತಮ್ಮ ಕಾರ್ಯದಲ್ಲಿ ತೊಡಗಿದ್ದಾರೆ.
ಲಾಕ್ ಡೌನ್ ಸಡಿಲಿಕೆ: ಸಹಜ ಸ್ಥಿತಿಯತ್ತ ಚಿಕ್ಕಮಗಳೂರು - ವಾಹನ ಸಂಚಾರ
ನಗರದಲ್ಲಿ ಪ್ರತಿಯೊಂದು ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಜನ ಎಂದಿನಂತೆ ತಮ್ಮ ದಿನನಿತ್ಯದ ಕಾರ್ಯದಲ್ಲಿ ತೊಡಗಿದ್ದಾರೆ.
ನಗರದ ಐ.ಜಿ ರಸ್ತೆ, ಎಂ.ಜಿ ರಸ್ತೆ, ಹಾಗೂ ಪ್ರಮುಖ ರಸ್ತೆಗಳಲ್ಲಿ ಪ್ರತಿಯೊಂದು ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಎಂದಿನಂತೆ ತಮ್ಮ ದಿನನಿತ್ಯದ ಕಾರ್ಯದಲ್ಲಿ ತೊಡಗಿದ್ದಾರೆ. ಬೈಕ್, ಕಾರುಗಳು, ಆಟೋಗಳು, ರಸ್ತೆಗೆ ರಸ್ತೆಗಿಳಿದಿದ್ದು, ಎಂದಿನಂತೆ ತಮ್ಮ ಸಂಚಾರ ಆರಂಭ ಮಾಡಿವೆ.
ನಗರ ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಪೊಲೀಸರು ಸಂಪೂರ್ಣ ಅನುವು ಮಾಡಿ ಕೊಟ್ಟಿದ್ದಾರೆ. ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಹಾಕಿದಂತಹ ಬ್ಯಾರಿಕೇಡ್ಗಳನ್ನು ಸಂಪೂರ್ಣ ತೆರವು ಮಾಡಿ, ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಇಂದಿನಿಂದ ಚಿಕ್ಕಮಗಳೂರು ಜಿಲ್ಲೆ ಸಹಜ ಸ್ಥಿತಿಗೆ ಬಂದಿದ್ದು, ಪ್ರತಿಯೊಬ್ಬರು ತಮ್ಮ ಎಂದಿನಂತೆ ಜೀವನ ನಡೆಸಲು ಪ್ರಾರಂಭ ಮಾಡಿದ್ದಾರೆ.