ಚಿಕ್ಕಮಗಳೂರು:ಜಿಲ್ಲೆಯಲ್ಲಿಯೂ ಲವ್ ಜಿಹಾದ್ ಆರೋಪ ಪ್ರಕರಣ ಬೆಳಕಿಗೆ ಬಂದಿದೆ. ಬೇರೆ ಸಮುದಾಯದ ಯುವಕ ಸೋಷಿಯಲ್ ಮೀಡಿಯಾದಲ್ಲಿ ತನ್ನ ಸಹೋದರಿಯ ಫೋಟೋ ಹಾಕಿದ್ದಾನೆ ಎಂದು ಆರೋಪಿಸಿ ಯುವಕ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಯುವತಿಯ ಸಹೋದರ ಲವ್ ಜಿಹಾದ್ ಪಿತೂರಿ ಅರೋಪ ಹೊರಿಸಿ ಕೊಪ್ಪ ಮೂಲದ ಯುವಕನ ವಿರುದ್ಧ ದೂರು ನೀಡಿದ್ದಾರೆ. ಈ ಬಗ್ಗೆ ದೂರು ನೀಡಿದ್ದರೂ ಸೆನ್(CEN) ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿಲ್ಲ ಎಂದು ಯುವಕ ಆರೋಪಿಸಿದ್ದಾನೆ.