ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: ಅಕ್ರಮ ಗಾಂಜಾ ಮಾರಾಟ : ಓರ್ವ ಬಂಧನ - Chikkamagaluru

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಚಿಕ್ಕಮಗಳೂರು ಪೋಲಿಸರು ಬಂಧಿಸಿದ್ದಾರೆ.

Chikkamagaluru
Chikkamagaluru

By

Published : Aug 19, 2020, 5:31 PM IST

ಚಿಕ್ಕಮಗಳೂರು:ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪೋಲಿಸರು ದಾಳಿ ಮಾಡಿ ಲಕ್ಷಾಂತರ ಮೌಲ್ಯದ ಗಾಂಜಾ ಹಾಗೂ ಓರ್ವ ವ್ಯಕ್ತಿಯನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಪೋಲಿಸರು ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಬಾಚಿಗನಹಳ್ಳಿ ಗ್ರಾಮದ ಕೆ.ಎಂ ರಸ್ತೆಯ ಪಕ್ಕದಲ್ಲಿ ಕವರ್ ನಲ್ಲಿ ಗಾಂಜಾ ಇಟ್ಟುಕೊಂಡು ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ವೇಳೆ ಸ್ಥಳೀಯರ ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ಮಾಡಿ, ಮಹಮ್ಮದ್ ಇಮ್ರಾಜ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ 2.5 ಲಕ್ಷ ಮೌಲ್ಯದ 5 ಕೆ. ಜಿ ಗಾಂಜಾ ಸೂಪ್ಪುನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ಈ ಗಾಂಜಾವನ್ನು ಯಾದಗಿರಿ ಜಿಲ್ಲೆಯ ಶಹಪುರದಿಂದ ಖರೀದಿಸಿ ತಂದು ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿರುವುದಾಗಿ ತನಿಖೆಯ ವೇಳೆ ಬಹಿರಂಗವಾಗಿದೆ.

ಈ ಕುರಿತು ಸಿಇಎಸ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಯಿಂದ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

ABOUT THE AUTHOR

...view details