ಚಿಕ್ಕಮಗಳೂರು:ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ಬಳಿ ಇರುವ ಮಸೀದಿ ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.
ಬಾಳೆಹೊನ್ನೂರಿನ ಮಸೀದಿ ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ - Chikkamagaluru crime latest news
ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯು ಇಂದು ಮಸೀದಿಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರಲ್ಲಿ ಘಟನೆ ನಡೆದಿದೆ.
Chikkamagaluru
ಮೃತ ವ್ಯಕ್ತಿಯನ್ನು ರಂಭಾಪುರಿ ಮಠದ ನಿವಾಸಿ ದಿನೇಶ್ (27) ಎಂದು ಗುರುತಿಸಲಾಗಿದೆ. ಈತ ಮರಗೆಲಸ ಮಾಡುತ್ತಿದ್ದ. ಆದ್ರೆ ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ. ಈ ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆದರೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಇಂದು ಕೆರೆಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಬಾಳೆಹೊನ್ನೂರು ಪೊಲೀಸರು, ಈ ಕುರಿತು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.