ಚಿಕ್ಕಮಗಳೂರು: ಜಮೀನಿಗೆ ಹೋಗುತ್ತಿದ್ದ ವ್ಯಕ್ತಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕುರಿ ಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸ್ಥಳದಲ್ಲೇ ಸಾವು - died news
ಜಮೀನಿಗೆ ಹೋಗುತ್ತಿದ್ದ ವ್ಯಕ್ತಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕುರಿ ಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
![ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸ್ಥಳದಲ್ಲೇ ಸಾವು](https://etvbharatimages.akamaized.net/etvbharat/prod-images/768-512-4555170-thumbnail-3x2-lek.jpg)
ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸ್ಥಳದಲ್ಲೇ ಸಾವು
ನಾಗರಾಜ್ (34) ಸಾವನ್ನಪ್ಪಿರುವ ವ್ಯಕ್ತಿ. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಗ್ರಾಮದ ಬಸವ ದೇವಸ್ಥಾನದ ವೈರ್ ಕಟ್ಟಾಗಿ ರಸ್ತೆಗೆ ಬಿದ್ದಿತ್ತು. ಈ ವೇಳೆ ರಸ್ತೆಯಲ್ಲಿ ಬಿದ್ದಿರುವ ವಿದ್ಯುತ್ ತಂತಿಯನ್ನು ನೋಡದೇ ಅದರ ಮೇಲೆ ಕಾಲಿಟ್ಟಿರುವ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸಖರಾಯ ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.