ಚಿಕ್ಕಮಗಳೂರು:ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಅಯ್ಯನ ಕೆರೆಯಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪ್ರವಾಸಕ್ಕೆ ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವು - ಸಖರಾಯಪಟ್ಟಣ ಪೊಲೀಸರು
ಜಿಲ್ಲೆಯಲ್ಲಿಯೇ ಅತ್ಯಂತ ಬೃಹತ್ ಕೆರೆಯಾಗಿರುವ ಅಯ್ಯನ ಕೆರೆಯಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪ್ರವಾಸಕ್ಕೆ ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವು
ರಕ್ಷಿತ್ ಶೆಟ್ಟಿ(24) ಮೃತಪಟ್ಟಿರುವ ಯುವಕ. ಕುಟುಂಬದ ಜೊತೆ ಪ್ರವಾಸಕ್ಕಾಗಿ ಹಾಸನ ಜಿಲ್ಲೆಯ ಜಾವಗಲ್ನಿಂದ ಅಯ್ಯನ ಕೆರೆಗೆ ಬಂದಂತಹ ಸಂದರ್ಭದಲ್ಲಿ ಈ ದುರಂತ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸತತ ಮೂರು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಸಖರಾಯಪಟ್ಟಣ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.