ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ವ್ಯಕ್ತಿಯೋರ್ವನ ಶವ ಕಾರಿನೊಳಗೆ ಪತ್ತೆಯಾಗಿದ್ದು, ಈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ನಿಂತಿದ್ದ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ಚಾರ್ಮಾಡಿ ಘಾಟಿಯಲ್ಲಿ ವ್ಯಕ್ತಿ ಆತ್ಮಹತ್ಯೆ ಶಂಕೆ! - ಚಾರ್ಮಾಡಿ ಘಾಟಿ
ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ನಿಂತಿದ್ದ ಕಾರಿನಲ್ಲಿ ಓರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಕಾರಿನಲ್ಲಿ ಪತ್ತೆಯಾದ ವ್ಯಕ್ತಿಯ ಮೃತದೇಹ
ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಮಲೆಯ ಮಾರುತ ಬಳಿ ಮಂಗಳವಾರ ಸಂಜೆಯಿಂದ KA 05, MT-4877 ನಂಬರಿನ ಕ್ವಿಡ್ ಕಾರು ನಿಂತಿತ್ತು. ಕಾರಿನ ಪಕ್ಕದಲ್ಲಿ ರಸ್ತೆ ಮೇಲೆ ವಿಷದ ಬಾಟಲಿ ಪತ್ತೆಯಾಗಿದ್ದು, ಡ್ರೈವಿಂಗ್ ಸೀಟಿನಲ್ಲಿ ಕುಳಿತು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.