ಚಿಕ್ಕಮಗಳೂರು:ಕಳೆದ ಮೂರು ನಾಲ್ಕು ದಿನಗಳ ಹಿಂದೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಸಗಲಿ ಹಾಗೂ ತೋಟದಮಕ್ಕಿ ಸುತ್ತಮುತ್ತಲ ಗ್ರಾಮಗಳಲ್ಲಿ ರೈತರ ಕಾಫಿ ಬೆಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ನಾಶಪಡಿಸಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮದ ನೂರಕ್ಕೂ ಹೆಚ್ಚು ಜನರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಅರಣ್ಯ ಇಲಾಖೆಯವರು ಆತುರದ ತೀರ್ಮಾನ ಕೈಗೊಂಡು ಕಾಫಿ ಬೆಳೆ ನಾಶಪಡಿಸಿದ್ದಾರೆ. ಇನ್ನು ನಾಲ್ಕು ತಿಂಗಳ ಕಾಲಾವಕಾಶ ನೀಡಿದ್ದರೆ, ಕಾಫಿ ಬೆಳೆ ರೈತರ ಕೈ ಸೇರುತ್ತಿತ್ತು. ಆದರೆ. ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಮೇಲೆ ದೌರ್ಜನ್ಯವೆಸಗಿದ್ದಾರೆ. ಹೀಗಾಗಿ ಕ್ರಮ ಕೈಗೊಂಡು, ರೈತರಿಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದರು.