ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮನೆವೊಂದಕ್ಕೆ ಆಕಸ್ಮಿಕಿ ಬೆಂಕಿ ತಗುಲಿದ ಪರಿಣಾಮ ಮನೆಯೇ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಬೆಂಕಿ ತಗುಲಿ ಹೊತ್ತಿ ಉರಿದ ಮನೆ... ಲಕ್ಷಾಂತರ ರೂ. ಮೌಲ್ಯದ ಕಾಳು ಮೆಣಸು, ಕಾಫಿ ಭಸ್ಮ! - ಹೊತ್ತಿ ಉರಿದ ಮನೆ
ಅಡುಗೆ ಮಾಡುತ್ತಿದ್ದ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಇಡೀ ಮನೆ ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದ ಭೈರೇ ದೇವರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮನೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಸಂಪೂರ್ಣವಾಗಿ ಭಸ್ಮವಾಗಿ ಹೋಗಿದೆ.
ವೆಂಕಟ ನರಸಿಂಹ ಎಂಬುವರ ಮನೆಯಲ್ಲಿ ಈ ದುರಂತ ಘಟನೆ ನಡೆದಿದ್ದು, ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಓಲೆಯ ಬೆಂಕಿಯಿಂದಾಗಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಇಡೀ ಮನೆಗೆ ಹತ್ತಿಕೊಂಡಿದೆ. ಇದರಿಂದ ಮನೆಯಲ್ಲಿ ಸಂಗ್ರಹ ಮಾಡಿ ಇಟ್ಟಿದ್ದ ಲಕ್ಷಾಂತರ ಮೌಲ್ಯದ ಕಾಳು ಮೆಣಸು ಹಾಗೂ ಕಾಫಿ ಬೆಂಕಿಯಲ್ಲಿ ಸಂಪೂರ್ಣ ನಾಶವಾಗಿದೆ. ಜಯಪುರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.