ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್​ ಪ್ರತಿಭಟನೆ - Massive protests against the kasturi Rangan Report

ಕಸ್ತೂರಿ ರಂಗನ್ ವರದಿ ಖಂಡಿಸಿ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

protest
ಪ್ರತಿಭಟನೆ

By

Published : Dec 15, 2020, 3:14 PM IST

ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ, ಹುಲಿ ಯೋಜನೆ ಖಂಡಿಸಿ, ಚಿಕ್ಕಮಗಳೂರಿನಲ್ಲಿ ಸಾವಿರಾರು ಜನರಿಂದ ಬೃಹತ್ ಪ್ರತಿಭಟನೆ ನಡೆಯಿತು.

ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್​ ಪ್ರತಿಭಟನೆ

ನಗರದ ಹನುಮಂತಪ್ಪ ವೃತ್ತದಿಂದ ಅಜಾದ್ ಪಾರ್ಕ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಸಾರ್ವಜನಿಕರು, ಈ ವೇಳೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕರಿಸಿ ಹಲವು ಗ್ರಾಮಗಳು ಈ ಪ್ರತಿಭಟನೆಯಲ್ಲಿ ಇಳಿದಿದ್ದು, ಪ್ರತಿಭಟನೆಯಲ್ಲಿ ಹಲವು ಪಕ್ಷ ಹಾಗೂ ಸಂಘಟನೆಯ ಮುಖಂಡರು ಭಾಗಿಯಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾವಿರಾರು ಜನರಿಂದ ಪ್ರತಿಭಟನೆ ಆಗುತ್ತಿರುವ ಹಿನ್ನೆಲೆ, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ವ್ಯಾಪಕ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೂಡ ಮಾಡಲಾಗಿದೆ.

ಓದಿ:ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ : ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ

ABOUT THE AUTHOR

...view details